ಬೆಳಗಾವಿ: ಪಂಜಾಬ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವನ್ನು ಸಂಭ್ರಮಿಸುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಹೃದಯಾಘಾತದಿಂದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಆರ್‌ಸಿಬಿ (RCB) ಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಹಿನ್ನೆಲೆ ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ವಿಜಯೋತ್ಸವ ವೇಳೆ ಕುಣಿದು ಕುಪ್ಪಳಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮಂಜುನಾಥ್ ಕುಂಬಾರ್ (25) ಹೃದಯಾಘಾತದಿಂದ ಸಾವನ್ನಪ್ಪಿದ ಯುವಕನಾಗಿದ್ದಾನೆ.
ಮಂಗಳವಾರ ಅಹಮದಾಬಾದ್‌ನಲ್ಲಿ ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಸಾಧಿಸಿದ ಹಿನ್ನೆಲೆ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಈ ವೇಳೆ ಹಾಡು ಹಾಕಿ ಕುಣಿಯುತ್ತಿದ್ದಾಗ ಮಂಜುನಾಥ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆ ಮಂಜುನಾಥ್ ಸಾವನ್ನಪ್ಪಿದ್ದಾರೆ.