ಪಿಸಿ ಮೋಹನ್ ಹಾಗೂ ಸಿಎಂ ಸಿದ್ದರಾಮಯ್ಯ 
ರಾಜ್ಯ

ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚುವ ಮೂಲಕ RCB ಐತಿಹಾಸಿಕ ಗೆಲುವನ್ನು ಗೌರವಿಸಿ: ಸರ್ಕಾರಕ್ಕೆ ಸಂಸದ ಪಿ.ಸಿ ಮೋಹನ್ ಆಗ್ರಹ

ಅಹಮದಾಬಾದ್ ನಲ್ಲಿ ನಡೆದ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಈ ಸಲ ಕಪ್ ನಮ್ದೇ ಎಂದು ಗೆದ್ದು ಬೀಗಿದೆ.

ಬೆಂಗಳೂರು: ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚುವ ಮೂಲಕ ಐಪಿಎಲ್ 2025 ಟ್ರೋಫಿ ಗೆದ್ದು ಐತಿಹಾಸಿಕ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೌರವ ಸಲ್ಲಿಸಿ ಎಂದು ರಾಜ್ಯ ಸರ್ಕಾರಕ್ಕೆ ಸಂಸದ ಪಿ.ಸಿ.ಮೋಹನ್ ಅವರು ಆಗ್ರಹಿಸಿದ್ದಾರೆ.

ಅಹಮದಾಬಾದ್ ನಲ್ಲಿ ನಡೆದ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಈ ಸಲ ಕಪ್ ನಮ್ದೇ ಎಂದು ಗೆದ್ದು ಬೀಗಿದೆ.

ತನ್ಮೂಲಕ ಮೊದಲ ಬಾರಿಗೆ ಬೆಂಗಳೂರು ತಂಡ ಐಪಿಎಲ್ ಕಪ್'ನ್ನು ಗೆದ್ದುಕೊಂಡಿದೆ. ಆರ್'ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತು. ಪಂಜಾಬ್ ತಂಡ 184 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತು.

ಈ ಮೂಲಕ ಕಳೆದ 18 ವರ್ಷಗಳಿಂದ ಪ್ರಶಸ್ತಿ ಬರ ಎದುರಿಸುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡ 18 ಆವೃತ್ತಿಯ ಐಪಿಎಲ್ ನಲ್ಲಿ 6 ರನ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಚೊಚ್ಚಲ ಪ್ರಶಸ್ತಿ ಗೆದ್ದುಕೊಂಡಿತು. ಇದರೊಂದಿಗೆ ಕೋಟಿ ಕೋಟಿ ಕನ್ನಡಿಗರ ಕನಸನ್ನು ನನಸಾಗಿಸಿದೆ.

ಆರ್'ಸಿಬಿ ಗೆಲವು ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪಿಸಿ.ಮೋಹನ್ ಅವರು, ಈ ಸಲಾ ಕಪ್ ನಮ್ದೆ ಇನ್ನು ಮುಂದೆ ಮೀಮ್ ಅಲ್ಲ, ಅದು ಈಗ ಇತಿಹಾಸ ಎಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ಕರ್ನಾಟಕ ಸರ್ಕಾರ ಈಗ ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚುವ ಮೂಲಕ ಆರ್‌ಸಿಬಿಯ ಐತಿಹಾಸಿಕ ಗೆಲುವನ್ನು ಗೌರವಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್