ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಬೈಕ್ ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವು

ಮೃತರನ್ನು ಹಂಚೀಪುರ ಗ್ರಾಮದ ಚಿಕ್ಕಸ್ವಾಮಿ(45), ಅವರ ಪತ್ನಿ ರೂಪಾ(38) ಮತ್ತು‌ ಕಣೇನೂರು ಗ್ರಾಮದ ಚನ್ನಮಲ್ಲಮ್ಮ(55) ಎಂದು ಗುರುತಿಸಲಾಗಿದೆ.

ಮೈಸೂರು: ನಂಜನಗೂಡು ತಾಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಬುಧವಾರ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಮತ್ತು ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರನ್ನು ಹಂಚೀಪುರ ಗ್ರಾಮದ ಚಿಕ್ಕಸ್ವಾಮಿ(45), ಅವರ ಪತ್ನಿ ರೂಪಾ(38) ಮತ್ತು‌ ಕಣೇನೂರು ಗ್ರಾಮದ ಚನ್ನಮಲ್ಲಮ್ಮ(55) ಎಂದು ಗುರುತಿಸಲಾಗಿದೆ.

ಚಿಕ್ಕಸ್ವಾಮಿ, ಪತ್ನಿ ರೂಪಾ ಮತ್ತು ಚನ್ನಮಲ್ಲಮ್ಮ ಅವರಿದ್ದ ಬೈಕ್​​ಗೆ ಲಾರಿ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಮೂವರೂ ರಸ್ತೆ ಮೇಲೆ ಬಿದ್ದಿದ್ದಾರೆ. ಈ ವೇಳೆ, ಲಾರಿಯು ಅವರ ಮೇಲೆ ಹರಿದಿದೆ. ಚಕ್ರಕ್ಕೆ ಸಿಲುಕಿದ ಮೂವರು ನುಜ್ಜುಗುಜ್ಜಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಡಿವೈಎಸ್​​ಪಿ ರಘು, ಪಿಎಸ್ಐ ಚೇತನ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತವಾದ ಲಾರಿಯು ತಮಿಳುನಾಡು ಮೂಲದ್ದಾಗಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ