ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

RCB ಅಭಿಮಾನಿಗಳ ಕಾಲ್ತುಳಿತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ

ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದರು.

ಬೆಂಗಳೂರು: 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಕಾಲ್ತುಳಿತ ದುರಂತದ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಿಧಾನಸೌಧದ ಬಳಿ ಯಾವುದೇ ದುರಂತ ಸಂಭವಿಸಿಲ್ಲ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತ ಸಂಭವಿಸಿದೆ. ಇಂತಹ ದೊಡ್ಡ ದುರಂತ ಸಂಭವಿಸಬಾರದಿತ್ತು. ಇದರಿಂದ ತುಂಬ ದುಃಖವಾಗುತ್ತಿದೆ ಎಂದರು.

ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದರು.

ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ ಅಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.

ನ್ಯಾಯಾಂಗ ತನಿಖೆಗೆ ಆದೇಶ

"ಈ ಘಟನೆಯನ್ನು ನಾನು ಸಮರ್ಥಿಸಿಕೊಳ್ಳಲು ಬಯಸುವುದಿಲ್ಲ. ನಮ್ಮ ಸರ್ಕಾರ ಇದರಲ್ಲಿ ರಾಜಕೀಯ ಮಾಡುವುದಿಲ್ಲ. ನಾನು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇನೆ ಮತ್ತು 15 ದಿನಗಳ ಕಾಲಾವಕಾಶ ನೀಡಿದ್ದೇನೆ. ಜನರು ಕ್ರೀಡಾಂಗಣದ ಗೇಟ್‌ಗಳನ್ನು ಸಹ ಮುರಿದರು. ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ಇಷ್ಟೊಂದು ದೊಡ್ಡ ಜನಸಂದಣಿಯನ್ನು ಯಾರೂ ನಿರೀಕ್ಷಿಸಿರಲಿಲ್ಲ. ಕ್ರೀಡಾಂಗಣವು ಕೇವಲ 35,000 ಜನರ ಸಾಮರ್ಥ್ಯವನ್ನು ಹೊಂದಿದೆ, ಆದರೆ 2-3 ಲಕ್ಷ ಜನರು ಬಂದಿದ್ದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 19 ಗಾಯಾಳುಗಳ ಪೈಕಿ 7 ಜನ ಮೃತಪಟ್ಟರೆ, ವೈದೇಹಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 8 ಜನ ಗಾಯಾಳುಗಳ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್​ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಸೂಕ್ತ ಭದ್ರತೆ ಒದಗಿಸಲು ಆಡಳಿತಕ್ಕೆ ಸಿಎಂ ಸೂಚನೆ

ಬಳಿಕ ಕಾವೇರಿ ನಿವಾಸದಲ್ಲಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಹಾಗೂ ನಗರ ಪೊಲೀಸ್ ಆಯುಕ್ತರ ಜೊತೆ ಸಭೆ ನಡೆಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಸಿಎಂ, ವಿದ್ಯಾರ್ಥಿಗಳು, ಯುವಕರು, ಯುವತಿಯರು ಮನೆಗೆ ಸೇಫಾಗಿ ತೆರಳಲು ವ್ಯವಸ್ಥೆ ಮಾಡಲು ಸೂಚಿಸಿದರು. ವಿಧಾನಸೌಧ, ಸ್ಟೇಡಿಯಂನ ಸುತ್ತ ಸಂಚಾರ ತೆರವುಗೊಳಿಸಿ ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಹಾಗೂ ಅಗತ್ಯ ಭದ್ರತೆ ಕಲ್ಪಿಸಲು ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET: ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ಪುಣೆ ಉಪನ್ಯಾಸಕಿ ಬಂಧನ

IPL 2026: SRH ವಿರುದ್ಧ RCB ಗೆ ಸೋಲು, ಸೋತರೂ ಅಗ್ರ ಸ್ಥಾನ ಅಬಾಧಿತ! ಕ್ವಾಲಿಫೈಯರ್ ಗೆ ಲಗ್ಗೆ

IPL 2026: SRH ಕನಸಿಗೆ ಕೊಳ್ಳಿ ಇಟ್ಟ RCB, ಗೆಲುವಿನ ಹೊರತಾಗಿಯೂ Eliminater ಅನಿವಾರ್ಯ!

NEET UG ಪ್ರಶ್ನೆಪತ್ರಿಕೆ ಸೋರಿಕೆ: ಈ ಬಾರಿ ಶೇ.100ರಷ್ಟು ದೋಷರಹಿತ ಮರು ಪರೀಕ್ಷೆ; ಕಠಿಣ ಕ್ರಮ ಎಂದ Dharmendra Pradhan

Rudraprayag ಭೀಕರ ಭೂಕುಸಿತ: ಸ್ಥಳದಲ್ಲೇ ಓರ್ವನ ಸಾವು, ಇಬ್ಬರು ಗಂಭೀರ, Video

SCROLL FOR NEXT