ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಮೊಗ್ಗ: RCB ವಿಜಯೋತ್ಸವದ ವೇಳೆ ಬೈಕ್ ಗಳ ಮುಖಾಮುಖಿ ಡಿಕ್ಕಿ; ಅಪಘಾತದಲ್ಲಿ ಯುವಕ ಸಾವು

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್‌ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಶಿವಮೊಗ್ಗ: ಐಪಿಎಲ್ ಫೈನಲ್ ನಲ್ಲಿ ಆರ್‌ಸಿಬಿ ತಂಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಸಂಭ್ರಮಾಚರಣೆ ವೇಳೆ ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಯುವಕ ಸಾವಿಗೀಡಾಗಿದ್ದಾನೆ.

ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಮೃತ ಯುವಕ. ಉಷಾ ನರ್ಸಿಂಗ್‌ ಹೋಂ ಸರ್ಕಲ್‌ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತ ಸಂಭವಿಸಿದೆ.

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್‌ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಇನ್ನೊಂದು ಬೈಕ್​ನಲ್ಲಿದ್ದ ಮಿಥುನ್​​​ ಹಾಗೂ ಅಭಿಷೇಕ್​​​ ಗಾಯಗೊಂಡಿದ್ದಾರೆ.

ಮಂಗಳವಾರ ರಾತ್ರಿ RCB ಟೀಂ ಗೆಲುವು ಸಾಧಿಸುತ್ತಿದ್ದಂತೆ ಯುವಕರು, ಕ್ರಿಕೆಟ್​​ ಪ್ರೇಮಿಗಳು ಉಷಾ ನರ್ಸಿಂಗ್​ ಹೋಂ ಬಳಿ ಸಂಭ್ರಮಾಚರಣೆ ನಡೆಸುತ್ತಿದ್ದರು. ನೂರು ಅಡಿ ರಸ್ತೆ ರವೀಂದ್ರ ನಗರದ ಕಡೆ ರಸ್ತೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಕುಣಿಯುತ್ತಿದ್ದರು. ಈ ವೇಳೆ ಮಿಥುನ್ ಹಾಗೂ ಅಭಿಷೇಕ್ ತಮ್ಮ ಬೈಕ್​ನಲ್ಲಿ ಉಷಾ ನರ್ಸಿಂಗ್​ ಹೋಂ ಕಡೆಯಿಂದ ವಿನೋಬನಗರ ಕಡೆಗೆ ಹೋಗುತ್ತಿದ್ದಾಗ, ಅದೇ ಕಡೆಯಿಂದ ಅಭಿಷೇಕ್​​ ಬರುತ್ತಿದ್ದು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿವೆ. ಈ ವೇಳೆ ಅಭಿಷೇಕ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video