ಡಾ ಪರಮೇಶ್ವರ್  
ರಾಜ್ಯ

ಬೆಂಗಳೂರು ಕಾಲ್ತುಳಿತದಲ್ಲಿ 11 ಜನ ಮೃತ, 56 ಮಂದಿಗೆ ಗಾಯ; ಶೀಘ್ರದಲ್ಲೆ ಹೊಸ SOP ಜಾರಿ: ಡಾ. ಜಿ ಪರಮೇಶ್ವರ್

ಗಾಯಗೊಂಡವರಲ್ಲಿ 46 ಮಂದಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. 10 ಮಂದಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಯಾರಿಗೂ ಗಂಭೀರ ಸ್ವರೂಪದಲ್ಲಿಲ್ಲ ಎಂದು ನಮ್ಮ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 56 ಜನ ಗಾಯಗೊಂಡಿದ್ದಾರೆ ಎಂದು ಇಂದು ಗುರುವಾರ ಗೃಹ ಸಚಿವ ಡಾ ಜಿ ಪರಮೇಶ್ವರ್ ದೃಢಪಡಿಸಿದ್ದಾರೆ.

ಗಾಯಗೊಂಡವರಲ್ಲಿ 46 ಮಂದಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. 10 ಮಂದಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಯಾರಿಗೂ ಗಂಭೀರ ಸ್ವರೂಪದಲ್ಲಿಲ್ಲ ಎಂದು ನಮ್ಮ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಹೊಸ SOP ಜಾರಿ

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಾ ಪರಮೇಶ್ವರ್, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟಲು ಸರ್ಕಾರ ಯಾವುದೇ ಸಭೆ ಸಮಾರಂಭಗಳನ್ನು ಮಾಡುವಾಗ, ವಿಜಯೋತ್ಸವವನ್ನು ಮಾಡುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿ ಮಾಡಬೇಕೆಂದು ಸೂಚನೆಗಳನ್ನು ನೀಡುತ್ತೇವೆ. ಹೊಸ ಶಿಷ್ಟಾಚಾರಗಳನ್ನು ಜಾರಿಗೆ ತರಲಾಗುವುದು ಎಂದರು.

ಬೆಂಗಳೂರಿನಲ್ಲಿ ನಡೆದ ಘಟನೆ ರೀತಿ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲಿಯೇ ಆಗಿರಲಿಲ್ಲ. ಮೃತಪಟ್ಟ ಯುವಕ-ಯುವತಿಯರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT