ಸ್ನೇಹಮಯಿ ಕೃಷ್ಣ 
ರಾಜ್ಯ

ಬೆಂಗಳೂರಿನ ಕಾಲ್ತುಳಿತ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

ಕಾನೂನು ಮತ್ತು ಸುರಕ್ಷತೆಯ ಬಗ್ಗೆ ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ವಿಧಾನಸೌಧದ ಮುಂದೆ ತರಾತುರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಿಂದ ಈ ದುರಂತ ಸಂಭವಿಸಿದೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ​​ಪದಾಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದು, ಈ ದುರಂತಕ್ಕೆ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಆರೋಪಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಸಿಎಂ, ಡಿಸಿಎಂ ವಿರುದ್ಧ ದೂರು ನೀಡಿದ್ದು, "ಇದು ಸರ್ಕಾರದ ಬೇಜವಾಬ್ದಾರಿಯಿಂದ ಉಂಟಾದ ದುರಂತ. ಆರ್‌ಸಿಬಿ ರಾಜ್ಯವನ್ನು ಪ್ರತಿನಿಧಿಸುವ ತಂಡವಲ್ಲ. ಇದು ಮದ್ಯ ಮಾರಾಟಗಾರರು ಖರೀದಿಸಿದ ಖಾಸಗಿ ತಂಡ. ಹೀಗಾಗಿ ರಾಜ್ಯ ಸರ್ಕಾರ ಅವರನ್ನು ಆಹ್ವಾನಿಸಿ ಸನ್ಮಾನಿಸುವ ಅಗತ್ಯವಿರಲಿಲ್ಲ" ಎಂದು ಹೇಳಿದ್ದಾರೆ.

ಕಾನೂನು ಮತ್ತು ಸುರಕ್ಷತೆಯ ಬಗ್ಗೆ ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ವಿಧಾನಸೌಧದ ಮುಂದೆ ತರಾತುರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಿಂದ ಈ ದುರಂತ ಸಂಭವಿಸಿದೆ. ಈ ದುರಂತಕ್ಕೆ ಸಿಎಂ ಮತ್ತು ಡಿಸಿಎಂ ಅವರೇ ಹೊಣೆ ಎಂದು ಅವರು ಆರೋಪಿಸಿದ್ದಾರೆ.

"ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇದಕ್ಕೆ ಮುಖ್ಯಮಂತ್ರಿ ಮತ್ತು ಡಿಸಿಎಂ ಕಾರಣ. ಪೊಲೀಸರು ಯುಡಿಆರ್ (ಅಸ್ವಾಭಾವಿಕ ಸಾವಿನ ವರದಿ) ದಾಖಲಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಭಾರತೀಯ ದಂಡ ಸಂಹಿತೆಯ 106 ನೇ ವಿಧಿಯ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು" ಎಂದು ಅವರು ಮನವಿ ಮಾಡಿದ್ದಾರೆ.

ಇನ್ನು ವಿರೋಧ ಪಕ್ಷಗಳು ಸಹ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಟೀಕಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ

T20 ವಿಶ್ವಕಪ್ 2026: 'ಚಿಂತೆ ಬೇಡ.. ಭಾರತೀಯ ಅಭಿಮಾನಿಗಳ ಸೈಲೆಂಟ್ ಮಾಡುತ್ತೇವೆ': Sam Curran ಅತ್ಯುತ್ಸಾಹ!

48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದಲ್ಲಿ 'ಭಂಡಾರ ಎಣಿಕೆ': RBI ಉಪಸ್ಥಿತಿ, ಯಾವಾಗ ಗೊತ್ತಾ?

SCROLL FOR NEXT