ಬಿಎಸ್ ಯಡಿಯೂರಪ್ಪ  ಸಾಂದರ್ಭಿಕ ಚಿತ್ರ
ರಾಜ್ಯ

ಬೆಂಗಳೂರು ಕಾಲ್ತುಳಿತ: ಪೊಲೀಸ್ ಅಧಿಕಾರಿಗಳ ಬಲಿಪಶು; ನಾಚಿಕೆಗೇಡಿನ ಕ್ರಮ- ಬಿಎಸ್ ಯಡಿಯೂರಪ್ಪ

ತಮ್ಮ ನೈತಿಕ ಜವಾಬ್ದಾರಿಯನ್ನು ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್ ಆಯುಕ್ತರೂ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ ಅಮಾನತು ಮಾಡಿರುವುದು ನಾಚಿಕೆಗೇಡಿನ ಕ್ರಮವಾಗಿದೆ

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಯಡಿಯೂರಪ್ಪ, ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರ್ಕಾರವೇ ವ್ಯವಸ್ಥೆಯ ಜವಾಬ್ದಾರಿ ಹೊತ್ತು, ಆರ್.ಸಿ.ಬಿ ವಿಜಯೋತ್ಸವದ ಆಚರಣೆಗೆ ಮುಂದಾಗಿ, ಇಂತಹ ಬಹುದೊಡ್ಡ ದುರಂತಕ್ಕೆ ಕಾರಣವಾಗಿರುವಾಗ, ತಮ್ಮ ನೈತಿಕ ಜವಾಬ್ದಾರಿಯನ್ನು ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್ ಆಯುಕ್ತರೂ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ ಅಮಾನತು ಮಾಡಿರುವುದು ನಾಚಿಕೆಗೇಡಿನ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಾರಂಭಕ್ಕೂ ಮುನ್ನವೇ ಕಾಲ್ತುಳಿತದಿಂದ ಸಾವು-ನೋವಾಗಿರುವ ಸುದ್ದಿ ತಲುಪಿದರೂ ಭಂಡತನದಿಂದ ಸನ್ಮಾನ ಕಾರ್ಯಕ್ರಮವನ್ನು ಮುಗಿಸಿ, ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಕಾರ್ಯಕ್ರಮ ಮುಂದುವರೆಸಿ, ಕಾಂಗ್ರೆಸ್ ಸರ್ಕಾರ ಕರುನಾಡಿನಲ್ಲಿ ಕರಾಳ ಇತಿಹಾಸ ಸೃಷ್ಟಿಸಿದೆ ಎಂದು ಆರೋಪಿಸಿದ್ದಾರೆ.

ಜನರ ಆಕ್ರೋಶವನ್ನು ತಣಿಸಲು ಹಾಗೂ ಉಚ್ಚ ನ್ಯಾಯಾಲಯದ ನ್ಯಾಯದಂಡದಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಕುರ್ಚಿಗೆ ಅಂಟಿ ಕೂರುವ ಸ್ವಾರ್ಥದ ಕ್ರಮವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕನಿಷ್ಠ ನೈತಿಕತೆ ಇದ್ದರೆ ಈ ದುರಂತ ಘಟನೆಯ ಜವಾಬ್ದಾರಿ ಹೊತ್ತು ಈ ಕೂಡಲೇ ರಾಜಿನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತು ಮಾಡಿದ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಈ ರೀತಿ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

SCROLL FOR NEXT