ಡಿಸಿಎಂ ಡಿಕೆ ಶಿವಕುಮಾರ್- ಸಂಸದ ತೇಜಸ್ವಿ ಸೂರ್ಯ online desk
ರಾಜ್ಯ

CM, DCM ಅದ್ಭುತ ಕ್ರಿಕೆಟ್ ಪ್ರದರ್ಶನದಿಂದ 18 ವರ್ಷಗಳ ಬಳಿಕ IPL ಗೆಲುವು; Virat Kohli, RCB ಯಿಂದ ಭದ್ರತಾ ವ್ಯವಸ್ಥೆ ಲೋಪ: Tejasvi Surya ವ್ಯಂಗ್ಯ

ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯಭರಿತ ಪೋಸ್ಟ್ ಅಪ್ಡೇಟ್ ಮಾಡಿರುವ ಸಂಸದರು. 18 ವರ್ಷಗಳ ಬಳಿಕ ತಮ್ಮ ಅದ್ಭುತ ಪ್ರದರ್ಶನದಿಂದ IPL ಕಪ್ ಗೆದ್ದಿದ್ದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಧನ್ಯವಾದ ಹೇಳಿದ್ದಾರೆ.

ಬೆಂಗಳೂರು: ಐಪಿಎಲ್ 2025 ರಲ್ಲಿ RCB ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ರಾಜ್ಯ ಸರ್ಕಾರ ನಿರ್ವಹಿಸುತ್ತಿರುವ ರೀತಿಗೆ ಸಂಸದ ತೇಜಸ್ವಿ ಸೂರ್ಯ (Tejasvi Surya) ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯಭರಿತ ಪೋಸ್ಟ್ ಅಪ್ಡೇಟ್ ಮಾಡಿರುವ ಸಂಸದರು. 18 ವರ್ಷಗಳ ಬಳಿಕ ತಮ್ಮ ಅದ್ಭುತ ಪ್ರದರ್ಶನದಿಂದ IPL ಕಪ್ ಗೆದ್ದಿದ್ದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಧನ್ಯವಾದ ಹೇಳಿದ್ದಾರೆ. ಅಷ್ಟೇ ಅಲ್ಲದೇ, ಸಂಭ್ರಮಾಚರಣೆ ವೇಳೆ RCB ಆರ್‌ಸಿಬಿ ಆಡಳಿತ ಮಂಡಳಿಯು ಭದ್ರತಾ ಕ್ರಮಗಳ ಕಳಪೆ ವ್ಯವಸ್ಥೆ ಮಾಡಿತ್ತು ಎಂದು ಆರೋಪಿಸಿದ್ದಾರೆ.

"18 ವರ್ಷಗಳ ನಂತರ ನಮಗೆ ಐಪಿಎಲ್ ಗೆದ್ದುಕೊಟ್ಟಿದ್ದಕ್ಕಾಗಿ ನಾವು ಆರ್‌ಸಿಬಿ ಅಭಿಮಾನಿಗಳು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಋಣಿಯಾಗಿದ್ದೇವೆ. ಅವರು ಮೈದಾನದಲ್ಲಿ ಅದ್ಭುತ ಕ್ರಿಕೆಟ್ ಮತ್ತು ನಾಯಕತ್ವ ಕೌಶಲ್ಯವನ್ನು ಪ್ರದರ್ಶಿಸಿದರು ಮತ್ತು ನಮ್ಮ ಕ್ಲಬ್‌ಗೆ ದೀರ್ಘಕಾಲದ ನಂತರ ಈ ವೈಭವವನ್ನು ತಂದುಕೊಟ್ಟಿದ್ದಾರೆ".

ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬಗಳಿಗೆ ಟ್ರೋಫಿ ಗೆದ್ದುಕೊಟ್ಟಿದ್ದಕ್ಕಾಗಿ ಸನ್ಮಾನಿಸಲು ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ, ಇತರ ಆಟಗಾರರು ಮತ್ತು ಆರ್‌ಸಿಬಿ ಆಡಳಿತ ಮಂಡಳಿ ಭದ್ರತಾ ಕ್ರಮಗಳ ಕಳಪೆ ವ್ಯವಸ್ಥೆ ಮಾಡಿದ್ದಕ್ಕಾಗಿ ನಾವು ತುಂಬಾ ಅಸಮಾಧಾನಗೊಂಡಿದ್ದೇವೆ.

ಆರ್‌ಸಿಬಿ ಆಡಳಿತ ಮಂಡಳಿಯನ್ನು ಬಂಧಿಸಲಾಗಿದೆ ಮತ್ತು ಪೊಲೀಸ್ ಆಯುಕ್ತರನ್ನು ಅಮಾನತುಗೊಳಿಸಲಾಗಿದೆ ಎಂಬುದು ಒಳ್ಳೆಯ ಬೆಳವಣಿಗೆ. ಬೆಂಗಳೂರಿನಲ್ಲಿ ಭದ್ರತೆಗೆ ಅವರೇ ಪ್ರಾಥಮಿಕವಾಗಿ ಜವಾಬ್ದಾರರು.

ಇಷ್ಟೆಲ್ಲಾ ಆದ ನಂತರ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಈಗ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹಿಂತಿರುಗಿ ತಮ್ಮ ಮುಂದಿನ ಐಪಿಎಲ್ ಗಾಗಿ ಅಭ್ಯಾಸವನ್ನು ಪ್ರಾರಂಭಿಸಬಹುದು" ಎಂದು ತೇಜಸ್ವಿ ಸೂರ್ಯ ಸರ್ಕಾರದ ಬಗ್ಗೆ ವ್ಯಂಗ್ಯ ಧಾಟಿಯಲ್ಲಿ ಟೀಕಾ ಪ್ರಹಾರ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪನ: ಕನಿಷ್ಠ 6 ಸಾವು, ಕೋಲ್ಕತಾ ಸೇರಿ ಭಾರತದ ಹಲವೆಡೆ ಕಂಪಿಸಿದ ಭೂಮಿ, Video

'7 ಕಿ.ಮೀ ಉದ್ದ, 25 ಮೀಟರ್ ಆಳ, 80 ರೂಮ್ ಗಳು': ಪಾತಾಳದಲ್ಲಿ 'ಹಮಾಸ್' ಲೋಕ ಪತ್ತೆ ಮಾಡಿದ ಇಸ್ರೇಲ್! Video

ಜಾರ್ಖಂಡ್‌ನಲ್ಲಿ ಮರ್ಯಾದಾ ಹತ್ಯೆ: ಬಾಯ್ ಫ್ರೆಂಡ್ ಜತೆ ಸಿಕ್ಕಿಬಿದ್ದ ಹುಡುಗಿಗೆ ಹೊಡೆದು ಕೊಂದ ಪೋಷಕರು!

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

SCROLL FOR NEXT