ಸಿಐಡಿ ಅಧಿಕಾರಿಗಳು 
ರಾಜ್ಯ

Bengaluru stampede: ತನಿಖೆಗಿಳಿದ CID; ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ, ಮಾಹಿತಿ ಸಂಗ್ರಹ

ಕಾಲ್ತುಳಿತ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಸಿಐಡಿ ವಿಶೇಷ ವಿಚಾರಣಾ ದಳದ ಎಸ್​ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದು, 56 ಮಂದಿ ಗಾಯಗೊಂಡಿದ್ದಾರೆ.

ಕಾಲ್ತುಳಿತ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಸಿಐಡಿ ವಿಶೇಷ ವಿಚಾರಣಾ ದಳದ ಎಸ್​ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

ಕಾಲ್ತುಳಿತ ಪ್ರಕರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳ ತಂಡ ಶುಕ್ರವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಕಚೇರಿಗೆ ಭೇಟಿ ನೀಡಿ, ಕಾಲ್ತುಳಿತ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಿದೆ.

ಗೇಟ್ ನಂಬರ್ 7, 19, 18, 16 ಮತ್ತು 21 ರ ಬಳಿ ಹೆಚ್ಚು ಅನಾಹುತ ಆಗಿತ್ತು. ಅಲ್ಲಿಗೆ ಭೇಟಿ ನೀಡಿದ ಸಿಐಡಿ ತಂಡ ಪರಿಶೀಲನೆ ನಡೆಸಿದೆ.

ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲು ಸಿಐಡಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದೆ. ಆದರೆ ಇಂದು ಸರ್ಕಾರಿ ರಜೆ, ನಾಳೆ ಭಾನುವಾರವಾಗಿರುವುದರಿಂದ, ಸೋಮವಾರ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಸಿಐಡಿ ತಂಡ ಸಿದ್ಧತೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!