ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಪಾದರಕ್ಷೆಗಳು ಬಿದ್ದಿರುವುದು  
ರಾಜ್ಯ

ಬೆಂಗಳೂರು ಕಾಲ್ತುಳಿತ: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಮೊನ್ನೆ ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ ತಿಳಿಸಿದ್ದಾರೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಐಪಿಎಲ್ ಟ್ರೋಫಿ ಆಚರಣೆಯ ಸಂದರ್ಭದಲ್ಲಿ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಗೆ ನೈತಿಕ ಹೊಣೆ ಹೊತ್ತು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ಎ ಶಂಕರ್ ಮತ್ತು ಇ ಎಸ್ ಜೈರಾಮ್ ರಾಜೀನಾಮೆ ನೀಡಿದ್ದಾರೆ.

ಮೊನ್ನೆ ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ ತಿಳಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಮತ್ತು ದುರದೃಷ್ಟಕರ ಘಟನೆಯಲ್ಲಿ ನಮ್ಮ ಪಾತ್ರ ಬಹಳ ಸೀಮಿತವಾಗಿದ್ದರೂ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ನಾವು ರಾಜೀನಾಮೆ ನೀಡಿದ್ದೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಮತ್ತು ಖಜಾಂಚಿ ಜಯರಾಮ್ ಅವರು ಹೈಕೋರ್ಟ್ ಗೆ ಪ್ರತಿಕ್ರಿಯೆ ನೀಡಿ, ಚಿನ್ನಸ್ವಾಮಿ ಸ್ಟೇಡಿಯಂನ ಗೇಟ್ ನಿರ್ವಹಣೆ ಮತ್ತು ಜನಸಂದಣಿ ನಿರ್ವಹಣೆ ಸಂಘದ ಜವಾಬ್ದಾರಿಯಲ್ಲ. ವಿಧಾನಸೌಧದಲ್ಲಿ ಆರ್‌ಸಿಬಿ ಐಪಿಎಲ್ ಆಚರಣೆಗಳನ್ನು ನಡೆಸಲು ಅನುಮತಿ ಕೋರಿದ್ದೆವು ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸನ್ಮಾನ ಸಮಾರಂಭವು ಯಾವುದೇ ಪ್ರಮುಖ ಅಡಚಣೆಗಳಿಲ್ಲದೆ ನಡೆದರೂ, ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಅವ್ಯವಸ್ಥೆ ಭುಗಿಲೆದ್ದಿತು, ಅಲ್ಲಿ ಆರ್‌ಸಿಬಿಯ ಸೋಷಿಯಲ್ ಮೀಡಿಯಾ ಪೇಜ್ ನ್ನು ಅನುಸರಿಸಿ ಲಕ್ಷಾಂತರ ಜನರು ಸೇರಿದ್ದರು, ಕೊನೆಗೆ ಪರೇಡ್ ರದ್ದಾದಾಗ ಸೋಷಿಯಲ್ ಮೀಡಿಯಾ ಪೇಜ್ ನಿಂದ ಮೆಸೇಜ್ ನ್ನು ಅಳಿಸಿಹಾಕಲಾಗಿತ್ತು.

ಆರ್ ಸಿಬಿ ಆಟಗಾರರ ಯೋಜಿತ ವಿಜಯೋತ್ಸವ ಮೆರವಣಿಗೆಯನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಗಿತ್ತು. ಹೊರಗೆ ನಡೆದ ದುರಂತದ ಹೊರತಾಗಿಯೂ ಕ್ರೀಡಾಂಗಣದೊಳಗಿನ ಕಾರ್ಯಕ್ರಮ ಮುಂದುವರೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

ಅಸ್ಥಿರಂಧ್ರತೆ (Osteoporosis) ಚಿಕಿತ್ಸೆಯಲ್ಲಿ ಹೊಸ ಬೆಳಕು: ಮೂಳೆ ಬಲದ ಮೂಲ ರಹಸ್ಯ ಪತ್ತೆ (ಕುಶಲವೇ ಕ್ಷೇಮವೇ)

Cricket: ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ODI ನಾಯಕರಾಗಿ ಶುಭ್ ಮನ್ ಗಿಲ್ ಆಯ್ಕೆ, Ro-KO ವಾಪಸ್!

1st test: ವಿಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 140 ರನ್ ಗಳ ಭರ್ಜರಿ ಜಯ

Israel -Gaza Conflict: ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ; ಶಾಂತಿ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ, ಟ್ರಂಪ್ ನಡೆಗೆ ಪ್ರಧಾನಿ ಮೋದಿ ಸ್ವಾಗತ

SCROLL FOR NEXT