ಥಳಿತ (ಸಾಂದರ್ಭಿಕ ಚಿತ್ರ) 
ರಾಜ್ಯ

ಬಾಲಕಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ: ಕಂಬಕ್ಕೆ ಕಟ್ಟಿ ಮೂವರು ಬಾಲಕರಿಗೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಥಳಿತ

ಅಪ್ರಾಪ್ತೆಗೆ ಅಶ್ಲೀಲ ಮೆಸೇಜ್ ಮತ್ತು​​ ಚುಡಾಯಿಸಿದ್ದಕ್ಕೆ ಧ್ವಜದ ಕಂಬಕ್ಕೆ ಕಟ್ಟಿಹಾಕಿ ಹಗ್ಗ, ದೊಣ್ಣೆ, ಚಪ್ಪಲಿಯಿಂದ ಮೈ ತುಂಬಾ ಬಾಸುಂಡೆ ಬರುವಂತೆ ಬಾಲಕರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಗದಗ: ಅಪ್ರಾಪ್ತೆ ಬಾಲಕಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿ ಮೂವರು ಬಾಲಕರಿಗೆ 55 ಮಂದಿಯಿದ್ದ ಗುಂಪೊಂದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ.

ಅಪ್ರಾಪ್ತೆಗೆ ಅಶ್ಲೀಲ ಮೆಸೇಜ್ ಮತ್ತು​​ ಚುಡಾಯಿಸಿದ್ದಕ್ಕೆ ಧ್ವಜದ ಕಂಬಕ್ಕೆ ಕಟ್ಟಿಹಾಕಿ ಹಗ್ಗ, ದೊಣ್ಣೆ, ಚಪ್ಪಲಿಯಿಂದ ಮೈ ತುಂಬಾ ಬಾಸುಂಡೆ ಬರುವಂತೆ ಬಾಲಕರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಜಿಲ್ಲೆಯ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ 28ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರ ಪೈಕಿ ಓರ್ವ ಬಾಲಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ.

ಬಾಲಕರ ಪೋಷಕರು ಮತ್ತು ಸಂಬಂಧಿಕರು 55 ಗ್ರಾಮಸ್ಥರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿದ್ದರೆ, ಗ್ರಾಮಸ್ಥರು ಮೂವರು ಬಾಲಕರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

ಅಪ್ರಾಪ್ತ ಬಾಲಕರನ್ನು ದಲಿತ ಸಮುದಾಯಕ್ಕೆ ಸೇರಿದವರು ಎಂದು ಹೇಳಲಾಗುತ್ತಿದ್ದು, ಜಾತಿ ಸಂಘರ್ಷ ಬೆದರಿಕೆ ಇರುವುದರಿಂದ ಗ್ರಾಮದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಘರ್ಷಣೆಯ ಭಯದಿಂದ ಸ್ಥಳೀಯ ನಿವಾಸಿಗಳು ಹೊರಗೆ ಹೋಗಲು ಹೆದರುತ್ತಿರುವುದರಿಂದ ಗ್ರಾಮದಲ್ಲಿ ಸ್ಮಶಾನ ಮೌನ ನಿರ್ಮಾಣವಾಗಿದೆ. ಘಟನೆ ಸಂಬಂಧ ಇಲ್ಲಿಯವರೆಗೆ ಎಂಟು ಗ್ರಾಮಸ್ಥರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಈ ಘಟನೆ ಮೇ 28 ರಂದು ನಡೆದಿದ್ದರೂ, ದೂರು ದಾಖಲಾದ ನಂತರ ಮೇ 30 ರಂದು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಗ್ರಾಮಸ್ಥರು ನಮಗೆ ಬೆದರಿಕೆ ಹಾಕಿದ್ದರು. ಬಳಿಕ ಬಾಲಕ ವಿಷ ಸೇವಿಸಿದ್ದಾನೆಂದು ಪೋಷಕರು ಹೇಳಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ, ಗದಗ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಗ್ರಾಮಕ್ಕೆ ಧಾವಿಸಿ ನಿವಾಸಿಗಳೊಂದಿಗೆ ಮಾತನಾಡಿದರು. ಆದರೆ, ಗ್ರಾಮದ ಕೆಲವು ಹಿರಿಯರು ಇದು ಜಾತಿ ಸಮಸ್ಯೆಯಾಗಿ ಬದಲಾಗಬಹುದು ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ್ದು, ಬಳಿಕ ಪೊಲೀಸರು ಎರಡೂ ಕಡೆಯಿಂದಲೂ ದೂರುಗಳನ್ನು ದಾಖಲಿಸಿಕೊಂಡಿದ್ದಾರಂದು ತಿಳಿದುಬಂದಿದೆ.

ಎರಡೂ ಕಡೆಯವರು ಪ್ರಕರಣಗಳನ್ನು ದಾಖಲಿಸಿರುವುದರಿಂದ, ತನಿಖೆ ನಡೆಸಲಾಗುತ್ತಿದೆ. ಪರಿಸ್ಥಿತಿಯನ್ನು ಶಮನಗೊಳಿಸಲು ಶಾಂತಿ ಸಭೆ ಕರೆಯಲಾಗುವುದು ಎಂದು ನೇಮಗೌಡ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT