ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ online desk
ರಾಜ್ಯ

ಕಾವೇರಿ ಆರತಿ ಯೋಜನೆಗೆ 100 ಕೋಟಿ ರೂ ಏಕೆ ಬೇಕು?: ರಾಜ್ಯ ಸರ್ಕಾರದ ವಿರುದ್ಧ HDK ಕಿಡಿ

ಕಾವೇರಿ ಆರತಿಗೆ 100 ಕೋಟಿ ರೂಪಾಯಿಗಳು ಏಕೆ ಬೇಕು? ಜೆಡಿಎಸ್ ನಾಯಕ ಪುಟ್ಟರಾಜು ಕೆರೆತೊಣ್ಣೂರಿನಲ್ಲಿ ಇಂತಹ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚಾಗಿತ್ತು? ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ?

ಮಂಡ್ಯ: ಕಾವೇರಿ ಆರತಿ ಯೋಜನೆಗೆ 100 ಕೋಟಿ ರೂಪಾಯಿ ವೆಚ್ಚ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ಮೈಶುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಕಾವೇರಿ ಆರತಿಗೆ 100 ಕೋಟಿ ರೂಪಾಯಿಗಳು ಏಕೆ ಬೇಕು? ಜೆಡಿಎಸ್ ನಾಯಕ ಪುಟ್ಟರಾಜು ಕೆರೆತೊಣ್ಣೂರಿನಲ್ಲಿ ಇಂತಹ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚಾಗಿತ್ತು? ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ? ಎಂದು ಪ್ರಶ್ನೆ ಮಾಡಿದರು.

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು. ಮೊದಲು ಮ್ಯಾಜಿಸ್ಟ್ರಿಯಲ್‌ ತನಿಖೆ ಎಂದರು. ಆಮೇಲೆ ನ್ಯಾಯಾಂಗ ತನಿಖೆ ಎಂದು ಹೇಳಿದರು. ಈಗ ಸಿಐಡಿಗೆ ಕೊಡುತ್ತೇವೆ ಎನ್ನುತ್ತಿದ್ದಾರೆ. ಅಂತಿಮವಾಗಿ ಯಾವ ತನಿಖೆ ವರದಿ ಪಡೆದುಕೊಳ್ಳುತ್ತಾರೆ ನೋಡೋಣ ಎಂದು ಟೀಕಿಸಿದರು.

ಇದನ್ನು ಸರಕಾರ ಎನ್ನಲು ಆಗುತ್ತದೆಯೇ? ಯಾವುದೇ ತೀರ್ಮಾನ ಮಾಡಿದರೆ ಅದರಲ್ಲಿ ಸ್ಪಷ್ಟತೆ ಇರಬೇಕು. ಅಧಿಕಾರಿಗಳ ತಪ್ಪು ಏನಿತ್ತು? ಎಫ್‌ಐಆರ್‌ನಲ್ಲಿ ಅಧಿಕಾರಿಗಳು ಕರ್ತವ್ಯ ಲೋಪವಾಗಿಲ್ಲ ಎಂದು ಉಲ್ಲೇಖ ಮಾಡಿದ್ದಾರೆ. ಆದರೆ, ಈ ವಿಚಾರದಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಿಡಿಕಾರಿದರು.

ಪಹಲ್ಗಾಮ್, ಪ್ರಯಾಗ್‌ರಾಜ್‌ನಲ್ಲಿ ನಡೆದ ಘಟನೆಗಳನ್ನು ಹೇಳುತ್ತಿದ್ದಾರೆ. ಆ ಘಟನೆಗಳಿಗೂ ಇದಕ್ಕೂ ಏನು ಸಂಬಂಧ? ಇಲ್ಲಿ ಇವರು ಮಾಡಿರುವ ತಪ್ಪಿಗೆ ಪಹಲ್ಗಾಮ್‌, ಪ್ರಯಾಗ್‌ರಾಜ್ ವಿಚಾರ ತರುತ್ತಿದ್ದಾರೆ. ಮನಮೋಹನ್‌ಸಿಂಗ್ ಪ್ರಧಾನಿಯಾಗಿದ್ದಾಗ ಮುಂಬೈ ಮೇಲೆ ಉಗ್ರರ ದಾಳಿ ಆಗಿತ್ತಲ್ಲವೇ? ಆಗ ಮನಮೋಹನ್‌ಸಿಂಗ್ ಅವರು ರಾಜೀನಾಮೆ ಕೊಟ್ಟಿದ್ದರಾ? ಕೇವಲ ಸಿಎಂ, ಡಿಸಿಎಂ ವರ್ಚಸ್ಸು ಹೆಚ್ಚಿಸಿಕೊಳ್ಳಲಿಕ್ಕೆ ಮಾಡಿದ ಶೋ ಇದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಕುಮಾರಸ್ವಾಮಿ ತಮ್ಮ ಆರೋಗ್ಯ ನೋಡಿಕೊಳ್ಳಲಿ" ಎಂದು ಹೇಳಿರುವ ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನನ್ನ ಆರೋಗ್ಯವನ್ನು ದೇವರು ನೋಡಿಕೊಳ್ಳುತ್ತಾನೆ. ಮಂಡ್ಯ ಜನರ ಹಾರೈಕೆಯಿಂದ ನನಗೆ ಏನೂ ಆಗೋದಿಲ್ಲ. ನಾನು ಯಾವುದೇ ಒತ್ತಡದಲ್ಲಿ ಇಲ್ಲ. ಅವರೇ ಒತ್ತಡದಲ್ಲಿ ಇದ್ದಾರೆ ಎಂದು ಟಾಂಗ್ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT