ದೇವಸ್ಥಾನ. 
ರಾಜ್ಯ

ಮಂಡ್ಯ: ದೇಗುಲ ಪ್ರವೇಶಕ್ಕೆ ನಿರಾಕರಣೆ; ದಲಿತರು-ಸವರ್ಣೀಯರ ನಡುವೆ ಸಂಘರ್ಷ; ಎಲೆಚಾಕನಹಳ್ಳಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ!

ಮೇಲ್ಜಾತಿಯ ಜನರು ಮಾರಮ್ಮ ದೇವಸ್ಥಾನಕ್ಕೆ ದಲಿತರು ಪ್ರವೇಶಿಸದಂತೆ ತಡೆದರು ಎನ್ನಲಾಗಿದ್ದು, ಘಟನೆ ಬಳಿಕ ಎರಡು ಸಮುದಾಯಗಳ ನಡುವೆ ಘರ್ಷಣೆ ಶುರುವಾಗಿತ್ತು ಎಂದು ತಿಳಿದುಬಂದಿದೆ.

ಮಂಡ್ಯ: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ಮಾರಮ್ಮ ದೇವಸ್ಥಾನ ಪ್ರವೇಶದ ವಿಚಾರದಲ್ಲಿ ಸವರ್ಣೀಯ ಮತ್ತು ದಲಿತ ಸಮುದಾಯಗಳ ನಡುವೆ ಸಂಘರ್ಷ ನಡೆದಿದ್ದು, ಘಟನೆ ಬಳಿಕ ಗ್ರಾಮದಲ್ಲಿ ಶನಿವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ, ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಪೊಲೀಸರು ಗ್ರಾಮದಲ್ಲಿ ಬಿಗಿ ಭದ್ರತೆ ನಿಯೋಜನೆಗೊಳಿಸಿದರು.

ಮೇಲ್ಜಾತಿಯ ಜನರು ಮಾರಮ್ಮ ದೇವಸ್ಥಾನಕ್ಕೆ ದಲಿತರು ಪ್ರವೇಶಿಸದಂತೆ ತಡೆದರು ಎನ್ನಲಾಗಿದ್ದು, ಘಟನೆ ಬಳಿಕ ಎರಡು ಸಮುದಾಯಗಳ ನಡುವೆ ಘರ್ಷಣೆ ಶುರುವಾಗಿತ್ತು ಎಂದು ತಿಳಿದುಬಂದಿದೆ.

ಬಳಿಕ ತಾಲ್ಲೂಕು ಅಧಿಕಾರಿಗಳು ದೇವಸ್ಥಾನವನ್ನು ತಾತ್ಕಾಲಿಕವಾಗಿ ಬಂದ್ ಮಾಡಿ ಬಿಗಿ ಭದ್ರತೆಯನ್ನು ನಿಯೋಜಿಸಿದರು. ನಂತರ, ಎರಡೂ ಸಮುದಾಯಗಳ ನಾಯಕರು ದೇವಸ್ಥಾನದ ಬಾಗಿಲುಗಳಿಗೆ ಪ್ರತ್ಯೇಕ ಬೀಗ ಹಾಕಿದರು, ಇದು ಬಿಕ್ಕಟ್ಟನ್ನು ಮತ್ತಷ್ಟು ಹೆಚ್ಚಿಸಿತು.

ಎರಡೂ ಗುಂಪುಗಳ ನಾಯಕರೊಂದಿಗೆ ಪ್ರತ್ಯೇಕ ಶಾಂತಿ ಸಭೆಗಳ ನಡೆಸಲಾಗಿದ್ದು, ಈ ಸಭೆಗಳು ವಿಫಲವಾಗಿವೆ ಎದು ತಿಳಿದುಬಂದಿದೆ.

ಗ್ರಾಮದ ದಲಿತರು ದೇವಸ್ಥಾನಕ್ಕೆ ಸಮಾನ ಪ್ರವೇಶವನ್ನು ಕೋರಿದ್ದಾರೆ, ಆದರೆ ಮೇಲ್ಜಾತಿಯ ನಾಯಕರು ಅದನ್ನು ವಿರೋಧಿಸುತ್ತಲೇ ಇದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಜೂ.3ರಂದು ತಡರಾತ್ರಿ ಸವರ್ಣೀಯರು ತನ್ನ ಮನೆಯ ಮುಂದೆ ನಿಲ್ಲಿಸಿದ್ದ ಕಾರನ್ನು ಜಖಂಗೊಳಿಸಿದ್ದಾರೆಂದು ದಲಿತ ಯುವಕ ವಿಜಯಕುಮಾರ್ ದೂರು ನೀಡಿದ್ದು, ಶಿವಲಿಂಗ ಅಲಿಯಾಸ್ ಪಾಪು, ದಿನೇಶ್, ಜನಾರ್ದನ, ಚೇತನ್‌ಕುಮಾರ್, ರೂಪೇಶ, ಮನು ಸೇರಿದಂತೆ ಇತರರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವಾದವನ್ನು ಪರಿಹರಿಸಲು ಅಧಿಕಾರಿಗಳು ಮುಂದಾಗಿದ್ದು, ಜೂನ್ 9 ರಂದು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT