ಗೇಟ್ ಬಳಿ ಜಮಾಯಿಸಿರುವ RCB ಅಭಿಮಾನಿಗಳು 
ರಾಜ್ಯ

Bengaluru Stampede: ಹಿಂದುಳಿದ ಮಠಾಧೀಶರಿಂದ RCB, KSCA ವಿರುದ್ಧ EDಗೆ ದೂರು

ಈ ಮಧ್ಯೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅತೀ ಹಿಂದುಳಿದ ಮಠಾಧೀಶರು, ಆರ್​ಸಿಬಿ ಮ್ಯಾನೇಜ್ಮೆಂಟ್​ ಮತ್ತು ಕೆಎಸ್​ಸಿಎ ವಿರುದ್ಧ ಇಡಿಗೆ ದೂರು ನೀಡಿದ್ದಾರೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದು, 56 ಮಂದಿ ಗಾಯಗೊಂಡಿದ್ದಾರೆ. ಈ ದುರಂತ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲ್ತುಳಿತ ಪ್ರಕರಣ ಸಂಬಂಧ ಈಗಾಗಲೆ ನಾಲ್ವರನ್ನು ಬಂಧಿಸಲಾಗಿದೆ.

ಈ ಮಧ್ಯೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅತೀ ಹಿಂದುಳಿದ ಮಠಾಧೀಶರು, ಆರ್​ಸಿಬಿ ಮ್ಯಾನೇಜ್ಮೆಂಟ್​ ಮತ್ತು ಕೆಎಸ್​ಸಿಎ ವಿರುದ್ಧ ಇಡಿಗೆ ದೂರು ನೀಡಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧವೂ ದೂರು ನೀಡಿದ್ದಾರೆ.

ಆರ್​ಸಿಬಿ ವಾಣಿಜ್ಯೋದ್ಯಮಕ್ಕಾಗಿ ಇದನ್ನು ಬಳಸಿಕೊಂಡಿದೆ. ತಮ್ಮ ಪ್ರತಿಷ್ಠೆಗಾಗಿ ಆರ್​​ಸಿಬಿ ಕೋಟ್ಯಂತರ ರೂ. ಖರ್ಚು ಮಾಡಿದೆ. ಆರ್​ಸಿಬಿ ಹಣಕಾಸು ವ್ಯವಹಾರ ಬಗ್ಗೆ ತನಿಖೆ ನಡೆಸಬೇಕು ಎಂದು ಅತೀ ಹಿಂದುಳಿದ ಮಠಾಧೀಶರ ಮಹಾಸಭಾ(ರಿ) ಮನವಿ ಮಾಡಿದೆ.

ಇನ್ನು, ಕೆಎಸ್​​ಸಿಎ ತನ್ನ ಸ್ಥಾನ ಮತ್ತು ಪದವಿಗಾಗಿ ಹಣ ನೀಡಿರುವುದು ಗೊತ್ತಾಗಿದೆ. ವಾಣಿಜ್ಯ ಸಂಸ್ಥೆಗಳಿಗೆ ನೀಡಬೇಕಿದ್ದ ಕೋಟಿಗಟ್ಟಲೇ ಹಣ ಬಾಕಿ ಇದೆ. ಕಾರ್ಯಕ್ರಮಕ್ಕೆಂದು ಹಣ ಸಂಗ್ರಹಿಸಿ ಬೇರೆ ಕಡೆ ಬಳಸಿದ್ದಾರೆ‌. ಸರ್ಕಾರ ಮತ್ತು ಬಿಸಿಸಿಐನಿಂದಲೂ ಹಣ ಪಡೆದು ತಪ್ಪು ಲೆಕ್ಕ ಕೊಟ್ಟಿದ್ದಾರೆ. ಸಾರ್ವಜನಿಕರಿಂದ ಪಡೆದ ಹಣಕ್ಕೆ ಸರಿಯಾದ ಲೆಕ್ಕ ಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಕೆಎಸ್​​ಸಿಎ ವಿರುದ್ಧವೂ ತನಿಖೆ ನಡೆಸುವಂತೆ ಮಧಾಧೀಶರು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಪೊಲೀಸರಿಗೆ ದೂರು

ಅತೀ ಹಿಂದುಳಿದ ಮಠಾಧೀಶರ ಸಭಾ ಬೆಂಗಳೂರಿನ ಕಬ್ಬನ್​ಪಾರ್ಕ್​​ ಠಾಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಗೃಹ ಸಚಿವ ಪರಮೇಶ್ವರ್ ಮತ್ತು ಆರ್​​ಸಿಬಿ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದೆ. ಇವರ ನಿರ್ಲಕ್ಷ್ಯದಿಂದಲೇ ಆರ್​ಸಿಬಿಯ 11 ಅಭಿಮಾನಿಗಳ ಸಾವಾಗಿದೆ. ಹೀಗಾಗಿ ನಾಲ್ವರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ದೂರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT