ಬೆಂಗಳೂರು ಮಳೆ  
ರಾಜ್ಯ

ರಾಜ್ಯದಲ್ಲಿ ಮುಂಗಾರು ಚುರುಕು: ಬೆಂಗಳೂರು ಸೇರಿ ಹಲವಡೆ ವಾರಾಂತ್ಯದಲ್ಲಿ ಮಳೆ ಆರ್ಭಟ ಹೆಚ್ಚಳ; IMD

ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಸೋಮವಾರ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಬೆಂಗಳೂರು: ಸೋಮವಾರದಿಂದ ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ವಾರಾಂತ್ಯದ ವೇಳೆಗೆ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಸೋಮವಾರ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಬಳಿಕ ವಾರಾಂತ್ಯದ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ನೈಋತ್ಯ ಮಾನ್ಸೂನ್ ಪ್ರಸ್ತುತ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇದು ದುರ್ಬಲವಾಗಿದೆ. ಕರಾವಳಿ ಕರ್ನಾಟಕದ ಹಲವೆಡೆ, ಉತ್ತರ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ.

ಮಂಗಳವಾರದ ಹವಾಮಾನ ಎಚ್ಚರಿಕೆಯಲ್ಲಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿ.ಮೀ) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ (ಗಂಟೆಗೆ 40-50 ಕಿ.ಮೀ) ಮಳೆಯಾಗುವ ಸಾಧ್ಯತೆಯಿದೆ" ಎಂದು ತಿಳಿಸಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರ ಬೆಂಗಳೂರು ನಗರದಲ್ಲಿ ಅಲ್ಪ ಪ್ರಮಾಣದ ಮಳೆ ವರದಿಯಾಗಿದ್ದು, ಗರಿಷ್ಠ ಉಷ್ಣಾಂಶ 31.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಒಂದೇ ಸೂರಿನಡಿ ರಾಮ್-ರಹೀಮ್: ದ್ವೇಷ ಹರಡುವವರ ಮಧ್ಯೆ ಮುಸ್ಲಿಮರಿಗಾಗಿ ‘ಇಫ್ತಾರ್ ಕೂಟ’ ಆಯೋಜಿಸುತ್ತಿರುವ ಹಿಂದೂ ಮಹಿಳೆ..!

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

SCROLL FOR NEXT