ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ 
ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಚೆಕ್ ವಿತರಿಸಿದ ರಾಜ್ಯ ಸರ್ಕಾರ

ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮಕ್ಕೆ ಭೇಟಿ ನೀಡಿದ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು, ಮೃತ ವ್ಯಕ್ತಿಯ ಮನೆಗೆ ಭೇಟಿ ನೀಡಿದರು.

ಮಂಡ್ಯ/ಕೋಲಾರ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಪೂರ್ಣಚಂದ್ರ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರವನ್ನು ಹಸ್ತಾಂತರ ಮಾಡಿದೆ.

ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮಕ್ಕೆ ಭೇಟಿ ನೀಡಿದ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು, ಮೃತ ವ್ಯಕ್ತಿಯ ಮನೆಗೆ ಭೇಟಿ ನೀಡಿದರು. ಈ ವೇಳೆ ಪೂರ್ಣಚಂದ್ರ ಅವರ ಪೋಷಕರಾದ ಗ್ರಾಮದ ಶಿಕ್ಷಕರಾದ ಆರ್.ಬಿ.ಚಂದ್ರು ಹಾಗೂ ಕಾಂತಾಮಣಿ ಅವರಿಗೆ 25 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕ್ರೀಡಾ ಇತಿಹಾಸದಲ್ಲಿ ಇದೊಂದು ಕಪ್ಪುಚುಕ್ಕೆಯಾಗಿ ಉಳಿಯುಲಿದೆ. ಇಂತಹ ಘಟನೆಯನ್ನು ಯಾರೊಬ್ಬರೂ ಕೂಡಾ ಊಹೆ ಮಾಡಿರಲಿಲ್ಲ ಎಂದು ಹೇಳಿದರು.

ಮೃತಪಟ್ಟ ಯುವಕ ಪೂರ್ಣಚಂದ್ರ ಜೀವನದಲ್ಲಿ ಹಲವು ಕನಸುಗಳನ್ನು ಹೊಂದಿದ್ದ ಯುವಕ. ಸರ್ಕಾರ ನೀಡುತ್ತಿರುವ ಪರಿಹಾರ ಅವರ ಸಮಾಧಾನಕ್ಕಷ್ಟೆ. ಕುಟುಂಬದ ನೋವನ್ನು ಹಣದಿಂದ ಭರಿಸಲು ಸಾಧ್ಯವಿಲ್ಲ. ಘಟನೆ ಕುರಿತು ತನಿಖೆ ನಡೆಯುತ್ತಿದೆ. ತಪ್ಪನ್ನು ಯಾರೆ ಮಾಡಿರಲಿ ಅವರಿಗೆ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರು. ಪರಿಹಾರ ಘೋಷಿಸಿದ್ದ ರಾಜ್ಯ ಸರ್ಕಾರ ಆನಂತರ ಎಲ್ಲರೊಂದಿಗೆ ಚರ್ಚಿಸಿ ಪರಿಹಾರದ ಮೊತ್ತವನ್ನು 25 ಲಕ್ಷ ರು.ಗಳಿಗೆ ಹೆಚ್ಚಿಸಿತು. ಅದನ್ನು ಇಂದು ಕುಟುಂಬಸ್ಥರಿಗೆ ವಿತರಿಸಿದ್ದೇನೆ. ಈ ಪರಿಹಾರದ ಜೊತೆಗೆ ಆರ್‌ಸಿಬಿಯಿಂದ 10 ಲಕ್ಷ, ಕರ್ನಾಟಕ ಕ್ರಿಕೆಟ್ ಅಸೋಷಿಯನ್ 5 ಲಕ್ಷ ರು. ಪರಿಹಾರ ಘೋಷಿಸಿದೆ. ಇದರಿಂದ ಪ್ರತಿ ಕುಟುಂಬಕ್ಕೂ ಒಟ್ಟು 40 ಲಕ್ಷ ರು. ಪರಿಹಾರ ದೊರಕಲಿದೆ ಎಂದರು.

ಇಂತಹ ಘಟನೆಗಳು ನಡೆದಾಗ ಎಲ್ಲರೂ ಕೂಡಾ ಸರ್ಕಾರಕ್ಕೆ ಬೆಂಬಲವಾಗಿ ನಿಂತು ಮುಂದೆ ಕರಾಳ ಘಟನೆ ನಡೆಯದ ಹಾಗೆ ಎಚ್ಚರವಹಿಸುವ ಸಲಹೆ ನೀಡಬೇಕು. ಆದರೆ, ವಿಪಕ್ಷಗಳು ದೂರುತ್ತಿರುವುದು ಸರಿಯಲ್ಲ ಎಂದರು.

ಸಿಎಂ ಅಥವಾ ಸಚಿವರಿಗೆ ಈ ಘಟನೆ ನಡೆಯುತ್ತದೆ ಎಂಬ ಕಲ್ಪನೆ ಕೂಡಾ ಇರಲಿಲ್ಲ. ಕ್ರೀಡಾಭಿಮಾನಿಗಳ ಜೊತೆಯಲ್ಲಿ ಸರ್ಕಾರ ನಿಂತಿತ್ತು. ಇದು ತಪ್ಪೆ? ಅವಕಾಶವನ್ನು ಮಾಡಿಕೊಡದಿದ್ದರೆ ಅದಕ್ಕೂ ಸರ್ಕಾರವನ್ನು ವಿಪಕ್ಷಗಳು ದೂರುತ್ತಿದ್ದವು. ಈಗ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಮೃತ ಪೋಷಕರಿಗೆ ಕ್ಷಮಿಸಪ್ಪಾ. ನಮ್ಮ ಕೈಯಿಂದ ಇಷ್ಟನ್ನೆ ಮಾಡಲಾಗುವುದು, ನಿಮ್ಮ ಅಳಿಯನಿಗೆ ಕೆ.ಆರ್.ಪೇಟೆ ಫುಡ್‌ಪಾರ್ಕ್‌ನಲ್ಲಿ ನೌಕರಿ ಕೊಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಭರವಸೆ ನೀಡಿದರು.

ಈ ವೇಳೆ ಶಾಸಕ ಎಚ್‌.ಟಿ.ಮಂಜು, ಜಿಲ್ಲಾಧಿಕಾರಿ ಡಾ.ಕುಮಾರ್, ತಹಸೀಲ್ದಾರ್‌ ಡಾ. ಎಸ್‌.ಯು. ಅಶೋಕ್, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಜಿಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಷ್, ತಾಪಂ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ಕೃಷಿಕ ಸಮಾಜದ ನಿರ್ದೇಶಕ ಹೆತ್ತಗೋನಹಳ್ಳಿ ನಾರಾಯಣಗೌಡ ಸೇರಿದಂತೆ ಹಲವರಿದ್ದರು.

ಈ ಮಧ್ಯೆ, ಕೋಲಾರ ಜಿಲ್ಲಾಧಿಕಾರಿ ಡಾ. ಎಂ. ರವಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಮಂಗಳಾ ಅವರು ಭಾನುವಾರ ಬೆಂಗಳೂರಿನಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ಸಹನಾ ಅವರ ಮನೆಗೆ ಭೇಟಿ ನೀಡಿ, ಅವರ ಪೋಷಕರಾದ ಸುರೇಶ್ ಬಾಬು ಮತ್ತು ಮಂಜುಳಾ ಅವರಿಗೆ ಪರಿಹಾರವಾಗಿ 25 ಲಕ್ಷ ರೂ.ಗಳ ಚೆಕ್ ಅನ್ನು ಹಸ್ತಾಂತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು, ವರಿಷ್ಠರು ಹೇಳಿದಾಗ ದೆಹಲಿಗೆ ಹೋಗುವೆ: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

'ಸಿಎಂ ಕುರ್ಚಿ' ಕದನದ ನಡುವೆ ವರದಿಗಾರರ ಪ್ರಶ್ನೆಗೆ ಕೆರಳಿದ ಡಿಕೆಶಿ! ಹೇಳಿದ್ದೇನು?

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ: ನಾಯಕ ಯಾರು? ರಿಷಭ್ ಪಂತ್ ಅಥವಾ ಕೆಎಲ್ ರಾಹುಲ್! ನಾಳೆ ನಿರ್ಧಾರ

"ನಾವೂ ಕಲಿಯಬೇಕು": ಮಾಮ್ದಾನಿ-ಟ್ರಂಪ್ ಭೇಟಿಯ ಬಗ್ಗೆ ತರೂರ್ ಪೋಸ್ಟ್; ನೀವು ಹೇಳಿದ್ದು ಸರಿ ಆದರೆ ರಾಹುಲ್ ಗೆ ಇದೆಲ್ಲಾ ಅರ್ಥ ಆಗತ್ತಾ?: BJP

SCROLL FOR NEXT