ರಾಯಲ್ ಚಾಲೆಂಜರ್ಸ್ ಬೆಂಗಳೂರು 
ರಾಜ್ಯ

ಬೆಂಗಳೂರು ಕಾಲ್ತುಳಿತ: ತನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ RCB

ಕಾರ್ಯಕ್ರಮದ ಆಯೋಜಕರಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕೂಡ ತನ್ನ ವಿರುದ್ಧದ ಎಫ್‌ಐಆರ್ ಅನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ.

ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಕಾರ್ಯಕ್ರಮದ ಆಯೋಜಕರಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕೂಡ ತನ್ನ ವಿರುದ್ಧದ ಎಫ್‌ಐಆರ್ ಅನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಾಲೀಕರಾದ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಲಿಮಿಟೆಡ್ (RCSL), ಈ ಪ್ರಕರಣದಲ್ಲಿ ತನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ. ಆರ್‌ಸಿಬಿ ಸಂಭ್ರಮಾಚರಣೆಗೆ ಸೀಮಿತ ಪಾಸ್‌ಗಳು ಮಾತ್ರ ಲಭ್ಯವಿದೆ ಎಂದು RCSL ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟವಾಗಿ ತಿಳಿಸಿತ್ತು ಎಂದು ಅರ್ಜಿಯಲ್ಲಿ ಹೇಳಿದೆ.

ಉಚಿತ ಪಾಸ್‌ಗಳಿಗೂ ಸಹ ಪ್ರವೇಶಕ್ಕೆ ಪೂರ್ವ ನೋಂದಣಿ ಕಡ್ಡಾಯ ಎಂದು ಹೇಳಲಾಗಿತ್ತು. ಮಧ್ಯಾಹ್ನ 1.45ಕ್ಕೆ ತೆರೆಯಬೇಕಿದ್ದ ಕ್ರೀಡಾಂಗಣದ ಗೇಟ್‌ಗಳನ್ನು ಮಧ್ಯಾಹ್ನ 3 ಗಂಟೆಗೆ ತೆರೆಯಲಾಗಿದ್ದು, ಇದರಿಂದಾಗಿ ಜನಸಂದಣಿ ಹೆಚ್ಚಾಗಿದೆ ಎಂದು ಅದು ಆರೋಪಿಸಿದೆ.

ಕಾರ್ಯಕ್ರಮ ನಿರ್ವಹಣಾ ಸಂಸ್ಥೆಯ ಪ್ರಕಾರ, ಪೊಲೀಸರ ಜನಸಂದಣಿ ನಿರ್ವಹಣೆಯ ವೈಫಲ್ಯದಿಂದಾಗಿ ಈ ಘಟನೆ ಸಂಭವಿಸಿದೆ.

ಸೋಮವಾರ ಮಧ್ಯಾಹ್ನ ಹೈಕೋರ್ಟ್ ಈ ವಿಷಯವನ್ನು ವಿಚಾರಣೆ ನಡೆಸುವ ನಿರೀಕ್ಷೆಯಿದೆ.

ಜೂನ್ 4ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿದ್ದರು ಮತ್ತು ಹಲವಾರು ಜನರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US ಜೊತೆಗೆ ವ್ಯಾಪಾರ ಒಪ್ಪಂದ: ಚೀನಾ, ಪಾಕಿಸ್ತಾನ, ಬಾಂಗ್ಲಾಗಿಂತಲೂ ಭಾರತಕ್ಕೆ ಹೆಚ್ಚಿನ ಲಾಭ! ರಷ್ಯಾದ ಮುಂದಿನ ನಡೆ ಏನು?

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ

'Mogambo Khush Hai': ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!

Weekly Horoscope: ವಾರ ಭವಿಷ್ಯ- ದ್ವಾದಶ ರಾಶಿಗಳ ಫಲಾಫಲ

T20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಒಂದು ಪಂದ್ಯ ಆಡದಿರಬಹುದೇ? ICC ನಿಯಮ ಏನು, ಆಗುವ ನಷ್ಟ ಎಷ್ಟು ಗೊತ್ತಾ!

SCROLL FOR NEXT