ಸಾಂದರ್ಭಿಕ ಚಿತ್ರ 
ರಾಜ್ಯ

Covid-19: ರಾಜ್ಯದಲ್ಲಿ ಇಂದು ಕೊರೋನಾಗೆ ಇಬ್ಬರು ಬಲಿ, 67 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಇಂದು ಒಟ್ಟು 571 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 67 ಜನರಿಗೆ ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 67 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1287ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಇಂದು ಮಹಾಮಾರಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 11ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು ಒಟ್ಟು 571 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 67 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 459 ಸಕ್ರಿಯೆ ಪ್ರಕರಣಗಳಿದ್ದು, ಈ ಪೈಕಿ 453 ಮಂದಿ ಮನೆ ಆರೈಕೆಯಲ್ಲಿದ್ದಾರೆ ಮತ್ತು 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೇ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ