ಜಾರಿ ನಿರ್ದೇಶನಾಲಯ 
ರಾಜ್ಯ

ಮುಡಾ ಪ್ರಕರಣ: 100 ಕೋಟಿ ರೂ ಮೌಲ್ಯದ 92 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಇ.ಡಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಮತ್ತು ಅಧಿಕಾರಿಗಳಿಗೆ ಸೇರಿದ ₹300 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ಇ.ಡಿ) 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಸುಮಾರು 100 ಕೋಟಿ ರೂ. ಮೌಲ್ಯದ 92 ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

'ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಮತ್ತು ಅಧಿಕಾರಿಗಳಿಗೆ ಸೇರಿದ ₹300 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈವರೆಗೂ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿ ಮೌಲ್ಯ ಸುಮಾರು 400 ಕೋಟಿ ರೂಪಾಯಿ' ಎಂದು ED ಮಂಗಳವಾರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳಿಗೆ ಹತ್ತಿರದ ಬೇನಾಮಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇ.ಡಿ ಹೇಳಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸರು ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ತನಿಖೆಯನ್ನು ಪ್ರಾರಂಭಿಸಿದೆ ಎಂದು ಇಡಿ ತಿಳಿಸಿದೆ.

ಮುಡಾ ನಿವೇಶನಗಳ ಹಂಚಿಕೆಯಲ್ಲಿ ವಿವಿಧ ಕಾನೂನುಗಳು ಮತ್ತು ಸರ್ಕಾರಿ ಆದೇಶಗಳು/ಮಾರ್ಗಸೂಚಿಗಳನ್ನು ಉಲ್ಲಂಘಿಸಿ ದೊಡ್ಡ ಪ್ರಮಾಣದ ಹಗರಣ ನಡೆದಿರುವುದು ಇಡಿ ತನಿಖೆಯಿಂದ ಬಹಿರಂಗವಾಗಿದೆ. ಜಿಟಿ ದಿನೇಶ್ ಕುಮಾರ್ ಸೇರಿದಂತೆ ಮುಡಾದ ಮಾಜಿ ಆಯುಕ್ತರು ನಿವೇಶನಗಳ ಅಕ್ರಮ ಹಂಚಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತನಿಖೆಯ ಸಮಯದಲ್ಲಿ ನಗದು, ಬ್ಯಾಂಕ್ ವರ್ಗಾವಣೆ, ಚರ/ಸ್ಥಿರ ಆಸ್ತಿಗಳ ರೂಪದಲ್ಲಿ ಅಕ್ರಮ ಹಂಚಿಕೆ ಮಾಡಲು ಲಂಚ ಪಡೆದಿರುವ ಬಗ್ಗೆ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ಇಡಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ಸೆಪ್ಟೆಂಬರ್ 11 ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ಸಾಧ್ಯತೆ

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!