ರಾಜ್ಯ

News headlines 10-06-2025 | ಮತ್ತೆ ಜಾತಿ ಗಣತಿ ಸಮೀಕ್ಷೆ- ಸಿಎಂ; ಮಂಗಳೂರು ಬಳಿ ಸಿಂಗಾಪುರ ಮೂಲದ ಹಡಗಿನಲ್ಲಿ ಅಗ್ನಿಅವಘಡ: ಭಾರತೀಯ ನೌಕಾಪಡೆ ರಕ್ಷಣಾ ಕಾರ್ಯಾಚರಣೆ; ಮುಡಾ ಕೇಸ್: 100 ಕೋಟಿ ರೂ ಮೌಲ್ಯದ ಆಸ್ತಿ ED ವಶಕ್ಕೆ

ಭೂಮಿಕ್ ಕುಟುಂಬಕ್ಕೆ ಆರ್ ಅಶೋಕ್ ಸಾಂತ್ವನ

ಮತ್ತೆ ಜಾತಿ ಗಣತಿ ಸಮೀಕ್ಷೆ- ಸಿಎಂ ಘೋಷಣೆ

ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಪ್ರಸ್ತುತ ಜಾತಿ ಗಣತಿ ವರದಿ 10 ವರ್ಷ ಹಳೆಯದಾಗಿರುವ ಕಾರಣ ನಿರ್ದಿಷ್ಟ ಕಾಲ ಮಿತಿಯಲ್ಲಿ ಮರು ಸಮೀಕ್ಷೆ ನಡೆಸಲು ಸರ್ಕಾರ ನಿರ್ಧಾರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಘೋಷಿಸಿದ್ದಾರೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು. ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಸಿಎಂ ಹೈಕಮಾಂಡ್ ನಾಯಕರೊಂದಿಗೆ ಮಾಹಿತಿ ನೀಡಿದ್ದು, ಸಚಿವ ಸಂಪುಟ ಪುನಾರ್ ರಚನೆ ಬಗ್ಗೆಯೂ ಚರ್ಚಿಸಿದ್ದಾರೆ. ಕಾಲ್ತುಳಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರೂ, ನ್ಯಾಯಾಂಗ ತನಿಖೆಯ ಸಮಯದಲ್ಲಿ ಕರ್ನಾಟಕ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಪಕ್ಷವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ತಿಳಿಸಿರುವುದಾಗಿ ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದರು.

ಕಾಲ್ತುಳಿತದಲ್ಲಿ ಮೃತಪಟ್ಟ ಭೂಮಿಕ್ ನಿವಾಸಕ್ಕೆ ಆರ್ ಅಶೋಕ್ ಭೇಟಿ

RCB ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಿವಾಸಿ ಭೂಮಿಕ್ ಅವರ ಮನೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇನ್ನು ಕಾಲ್ತುಳಿತ ಘಟನೆಯ ಬಗ್ಗೆ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಜೂನ್ 12ಕ್ಕೆ ಕರ್ನಾಟಕ ಹೈಕೋರ್ಟ್ ಮುಂದೂಡಿದ್ದು, ಮುಚ್ಚಿದ ಲಕೋಟೆಯಲ್ಲಿ ಉತ್ತರ ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರಿಗೆ ನ್ಯಾಯಾಲಯ ಆದೇಶಿಸಿದೆ.

ಮುಡಾ ಕೇಸ್: 100 ಕೋಟಿ ರೂ ಮೌಲ್ಯದ ಆಸ್ತಿ ED ವಶಕ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲ ಆರೋಪಿಯನ್ನಾಗಿಸಿರುವ ಮುಡಾ ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ 100 ಕೋಟಿ ರೂ. ಮೌಲ್ಯದ 92 ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಮತ್ತು ಅಧಿಕಾರಿಗಳಿಗೆ ಸೇರಿದ 300 ಕೋಟಿ ರೂ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈವರೆಗೂ ಸುಮಾರು 400 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳಿಗೆ ಹತ್ತಿರದ ಬೇನಾಮಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ED ಹೇಳಿದೆ.

ಮಂಗಳೂರಿನ ಆಳ ಸಮುದ್ರದಲ್ಲಿ ಅಗ್ನಿಅವಘಡಕ್ಕೆ ಸಿಲುಕಿದ ಸಿಂಗಾಪುರ ಮೂಲದ ಹಡಗು; ಭಾರತೀಯ ನೌಕಾಪಡೆಯಿಂದ ರಕ್ಷಣಾ ಕಾರ್ಯಾಚರಣೆ

ಮಂಗಳೂರಿನ ಆಳ ಸಮುದ್ರದಲ್ಲಿ ಅಗ್ನಿಅವಘಡಕ್ಕೆ ತುತ್ತಾಗಿರುವ ಸಿಂಗಾಪುರ ಮೂಲದ MV WAN HAI 503 ಸರಕು ಸಾಗಾಣಿಕಾ ಹಡಗಿನಲ್ಲಿ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಭಾರತದ ಸಮುದ್ರ ಪ್ರಹರಿ, ಸಚೇತ್, ಐಸಿಜಿ ಹಡಗು ಸಮರ್ಥ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಕೇರಳದ ಬೇಪೋರ್ ಕಡಲ ತೀರದಿಂದ 78 ನಾಟಿಕಲ್ ಮೈಲ್ಸ್ ದೂರದ ಆಳ ಸಮುದ್ರದಲ್ಲಿ ಈ ಘಟನೆ ನಡೆದಿದೆ. ಹಡಗಿನಲ್ಲಿದ್ದ 18 ಜನ‌ ಸಿಬ್ಬಂದಿಯನ್ನು ಭಾರತೀಯ ನೌಕಾ ಪಡೆ ರಕ್ಷಿಸಿದೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT