ಸಂಗ್ರಹ ಚಿತ್ರ 
ರಾಜ್ಯ

ಪಬ್ ಹೊರಗೆ 2 ಗುಂಪುಗಳ ನಡುವೆ ಮಾರಾಮಾರಿ: ಮೂವರ ಬಂಧನ

ಜೂನ್‌ 7ರಂದು ಮಧ್ಯರಾತ್ರಿ 1ರ ಸುಮಾರಿಗೆ ಕೋರಮಂಗಲದ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪಬ್ ಹೊರಗೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು.

ಬೆಂಗಳೂರು: ಪಬ್‌ ಎದುರು ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೋರಮಂಗಲ ಠಾಣೆ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.

ಜೂನ್‌ 7ರಂದು ಮಧ್ಯರಾತ್ರಿ 1ರ ಸುಮಾರಿಗೆ ಕೋರಮಂಗಲದ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪಬ್ ಹೊರಗೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು.

ಒಂದು ಗುಂಪಿನ ಸದಸ್ಯರು, ಯುವತಿಯನ್ನು ಮಾತನಾಡಿಸಲು ಯತ್ನಿಸಿದ್ದರು. ಆಕೆಯ ಸ್ನೇಹಿತರು ಎದುರಾಳಿ ಗುಂಪಿನೊಂದಿಗೆ ವಾಗ್ವಾದ ನಡೆಸಿದ್ದರು. ಈ ಜಗಳ ವಿಕೋಪಕ್ಕೆ ತಿರುಗಿ ಹಲ್ಲೆ, ಕಲ್ಲು ತೂರಾಟ ನಡೆದಿತ್ತು.

ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಆ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ದೃಶ್ಯಾವಳಿ ಆಧರಿಸಿ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಮೂವರಲ್ಲಿ ಇಬ್ಬರು ಕೇರಳದವರಾಗಿದ್ದು, ಓರ್ವ ಚಿಕ್ಕಮಗಳೂರು ಮೂಲದವನು ಎಂದು ತಿಳಿದುಬಂದಿದೆ. ಇನ್ನು ಹಲ್ಲೆಗೊಳಗಾಗಿದ್ದ ಮೂವರು ಕೂಡ ಕೇರಳದವರೇ ಆಗಿದ್ದು, ಒಂದೇ ಫ್ಲಾಟ್ ನಲ್ಲಿ ಒಟ್ಟಿಗೆ ವಾಸವಿದ್ದಾರೆನ್ನಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಪರಿಶೀಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಡಿಸಿಪಿ (ಆಗ್ನೇಯ) ಸಾರಾ ಫಾತಿಮಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT