ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌: DPR ಸಿದ್ಧತೆ ಆರಂಭ

ಕಾರಿಡಾರ್ ರಸ್ತೆ ನಿರ್ಮಾಣದ ಬಗ್ಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಪತ್ರ ಬಂದಿದ್ದು, ಡಿಪಿಆರ್ ಸಿದ್ಧಪಡಿಸುವುದಕ್ಕೆ ಏ.30ರಂದು ಗುತ್ತಿಗೆ ನೀಡಲಾಗಿದೆ.

ಬೆಂಗಳೂರು: ಬಹು ನಿರೀಕ್ಷಿತ ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದೆ.

ಹೆದ್ದಾರಿ ಸಚಿವಾಲಯದಿಂದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದ್ದಾರೆ.

ಕಾರಿಡಾರ್ ರಸ್ತೆ ನಿರ್ಮಾಣದ ಬಗ್ಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಪತ್ರ ಬಂದಿದ್ದು, ಡಿಪಿಆರ್ ಸಿದ್ಧಪಡಿಸುವುದಕ್ಕೆ ಏ.30ರಂದು ಗುತ್ತಿಗೆ ನೀಡಲಾಗಿದೆ. ಈ ಪ್ರಕ್ರಿಯೆ ಪೂರ್ಣವಾಗಲು 18 ತಿಂಗಳು ಅವಧಿ ನಿರೀಕ್ಷಿಸಲಾಗಿದೆ. ದ.ಕ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಈ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ಮಹತ್ವದ ಹೆಜ್ಜೆ ಇರಿಸಿರುವ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ಹಾಗೂ ಹೆದ್ದಾರಿ ಸಚಿವ ಗಡ್ಕರಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಸಂಸದರು ತಿಳಿಸಿದ್ದಾರೆ.

ಈ ಹೈಸ್ಪೀಡ್ ಎಕ್ಸ್‌ಪ್ರೆಸ್ ಹೆದ್ದಾರಿಯು 4-8 ಪಥಗಳನ್ನು ಹೊಂದುವ ನಿರೀಕ್ಷೆಯಿದ್ದು, ಹಾಸನದ ಮೂಲಕ ಹಾದು ಹೋಗಲಿದೆ. ಈ ಹೆದ್ದಾರಿಯಿಂದ ಎರಡು ಮಹಾನಗರಗಳ ನಡುವಿನ ಸಾರಿಗೆ ಮೂಲಸೌಕರ್ಯ ಮತ್ತಷ್ಟು ಮೇಲ್ದರ್ಜೆಗೇರಲಿದೆ. ಸಂಚಾರ ದಟ್ಟಣೆ ಹಾಗೂ ಪ್ರಯಾಣದ ಸಮಯ ಕಡಿಮೆಯಾಗಲಿದೆ. ಈ ಯೋಜನೆಯಿಂದ ಮಂಗಳೂರು ಮಾತ್ರವಲ್ಲದೇ ದಕ್ಷಿಣ ಕರ್ನಾಟಕಕ್ಕೆ ಹಾಗೂ ಸುತ್ತಮುತ್ತದ ನಗರಗಳ ಅಭಿವೃದ್ದಿಗೆ ಸಹಕಾರಿಯಾಗಲಿದೆ. ಮಂಗಳೂರು ಬಂದರು ಹಾಗೂ ಪ್ರವಾಸೋದ್ಯಮ, ವ್ಯಾಪಾರ , ವಾಣಿಜ್ಯ ಚಟುವಟಿಕೆಗಳ ಬೆಳವಣಿಗೆಗೂ ಇನ್ನಷ್ಟು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಶಿರಾಡಿ ಘಾಟಿಯಲ್ಲಿ ಪ್ರತ್ಯೇಕ ರೈಲು ಮಾರ್ಗ ನಿರ್ಮಿಸಲು ರೈಲ್ವೆ ಇಲಾಖೆ ಡಿಪಿಆರ್ ಸಿದ್ದಪಡಿಸಲು ಮುಂದಾಗಿದೆ. ಇಲ್ಲಿ ರಸ್ತೆ ಮತ್ತು ರೈಲು ಮಾರ್ಗವನ್ನು ಸಮಾನಾಂತರವಾಗಿ ಅಭಿವೃದ್ದಿಸುವ ಸಾಧ್ಯತೆಗಳ ಬಗ್ಗೆ ಅನ್ವೇಷಿಸಲು ರೈಲ್ವೆ ಮಂಡಳಿ ಮತ್ತು ಎನ್‌ಎಚ್ಎಐ ಅಧಿಕಾರಿಗಳನ್ನು ಒಳಗೊಂಡ ಜಂಟಿ ಸಮಿತಿಯನ್ನು ರಚಿಸುವಂತೆ ಕೋರಿದ್ದೇನೆ’ ಎಂದು ಇದೇ ವೇಳೆ ಸಂಸದರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT