ಸಂಗ್ರಹ ಚಿತ್ರ 
ರಾಜ್ಯ

ನಿಮ್ಮ ಕಾಲಿಗೆ ಬೀಳುತ್ತೇನೆ, ನನಗೆ ಮದುವೆ ಬೇಡ: ಅಂಗಲಾಚಿದರೂ ಬಲವಂತವಾಗಿ ಬಾಲಕಿಗೆ ತಾಳಿಕಟ್ಟಿಸಲು ಪೋಷಕರ ಯತ್ನ! Video

ಜೂನ್ 4 ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೆಡ್ಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದ್ದು, ನೆಟ್ಟಿಗರಿಂದ ವ್ಯಾಪ ಟೀಕೆ ವ್ಯಕ್ತವಾಗಿದೆ.

ಚಿತ್ರದುರ್ಗ: ನನ್ನನ್ನು ಬಿಟ್ಟುಬಿಡಿ, ನಿಮ್ಮ ಕಾಲಿಗೆ ಬೀಳುತ್ತೇನೆ. ನನಗೆ ಮದುವೆ ಬೇಡ ಎಂದು ಪುಟ್ಟ ಬಾಲಕಿಯೊಬ್ಬಳು ಅಂಗಲಾಚಿದರೂ ಬಿಡದೆ ಕುಟುಂಬವೊಂದು ಬಾಲ್ಯವಿವಾಹಕ್ಕೆ ಮುಂದಾಗಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜೂನ್ 4 ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೆಡ್ಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದ್ದು, ನೆಟ್ಟಿಗರಿಂದ ವ್ಯಾಪ ಟೀಕೆ ವ್ಯಕ್ತವಾಗಿದೆ.

ವಿಡಿಯೋದಲ್ಲಿ ಅಪ್ರಾಪ್ತ ಬಾಲಕಿ ‘ನನ್ನನ್ನು ಬಿಟ್ಟು ಬಿಡಿ, ನಿಮ್ಮ ಕಾಲಿಗೆ ಬೀಳುತ್ತೇನೆ. ನನಗೆ ಈ ಮದುವೆ ಬೇಡ. ನನಗೆ ದೇವರೇ ಗತಿ, ಕಾಪಾಡು ದೇವರೇ, ಎಲ್ಲಿದ್ದೀಯಪ್ಪಾ ದೇವ್ರೆ” ಎಂದು ಅಂಗಲಾಚುತ್ತಿದ್ದರೂ . ಮದುವೆ ಮಾಡಬೇಕೆಂದು ಪಟ್ಟು ಹಿಡಿದಿರುವ ಪೋಷಕರು, ಬಾಲಕಿಯನ್ನು ಹೊಡೆದು ಬಡಿದು ಎಳೆದಾಡುತ್ತಿರುವುದು ಘಟನೆ ಮನಕಲಕುವಂತಿದೆ.

ಘಟನೆ ವೇಳೆ ಗ್ರಾಮಸ್ಥರು ಮಧ್ಯಪ್ರವೇಶಿಸಿದ್ದರೂ, ಕುಟುಂಬದವರು ತಡೆದು ವಿವಾಹಕ್ಕೆ ಯತ್ನಿಸಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಏತನ್ಮಧ್ಯೆ ಮದುವೆಯಾಗದಿರಲು ಗಟ್ಟಿ ನಿರ್ಧಾರದಲ್ಲಿದ್ದ ಬಾಲಕಿ ಕೊನೆಗೂ ಮನೆಯಿಂದ ಓಡಿ ಹೋಗುವ ಮೂಲಕ ವಿವಾಹದಿಂದ ತಪ್ಪಿಸಿಕೊಂಡಿದ್ದಾಳೆಂದು ತಿಳಿದುಬಂದಿದೆ.

ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಚಳ್ಳಕೆರೆಯ ಪೊಲೀಸರು ಮತ್ತು ಮಕ್ಕಳ ಕಲ್ಯಾಣ ಸಮಿತಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಸಿ ಸವಿತಾ ಅವರು ಈ ವಿಷಯದ ಬಗ್ಗೆ ಮಾತನಾಡಿ, ನಾವು ತಕ್ಷಣ ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿದ್ದೇವೆ. ಆಕೆ ಈಗ ಬಾಲ ಮಂದಿರದಲ್ಲಿದ್ದಾಳೆ. ಮಕ್ಕಳ ಕಲ್ಯಾಣ ಸಮಿತಿ ಹುಡುಗಿಯೊಂದಿಗೆ ಮಾತನಾಡುತ್ತದೆ. ಸಲಹೆಗಾರರು ಆಕೆಗೆ ಸಮಾಧಾನ ಹೇಳುತ್ತಾರೆ. ಹುಡುಗಿಯ ಹೇಳಿಕೆ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಆಕೆ ತನ್ನ ಗ್ರಾಮಕ್ಕೆ ಹಿಂತಿರುಗಿ ತನ್ನ ಹೆತ್ತವರೊಂದಿಗೆ ಇರಲು ಒಪ್ಪಿದರೆ, ನಾವು ಆಕೆಯನ್ನು ಕಳುಹಿಸುತ್ತೇವೆ. ಇಲ್ಲದಿದ್ದರೆ, ಆಕೆ ಬಾಲ ಮಂದಿರದಲ್ಲಿಯೇ ಇದ್ದು, ಅಲ್ಲಿಂದಲೇ ಶಾಲೆಗೆ ಹೋಗುತ್ತಾಳೆಂದು ಹೇಳಿದ್ದಾರೆ.

ಘಟನೆಗೆ ಸಂಬಂಧಸಿದಂತೆ ಐವರ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಸಿದ್ದು, ಈ ಪೈಕಿ ಬಾಲಕಿ ತಾಯಿ, ತಾಳಿ ಕಟ್ಟಲು ಯತ್ನಿಸಿದ ವರ ಹಾಗೂ ಸಂಬಂಧಿಕರು ಇದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ