ಬಿಜೆಪಿ (ಸಂಗ್ರಹ ಚಿತ್ರ) online desk
ರಾಜ್ಯ

BJP: 10 ಜಿಲ್ಲೆಗಳಿಗೆ ಹೊಸ ಅಧ್ಯಕ್ಷರ ನೇಮಕ; ಯಾರು ಎಲ್ಲಿಗೆ? ಇಲ್ಲಿದೆ ಮಾಹಿತಿ...

ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಬಾಕಿ ಉಳಿದಿದ್ದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ರಾಜ್ಯ ಬಿಜೆಪಿ ನೇಮಕ ಮಾಡಿದೆ.

ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ಪಕ್ಷ ನೇಮಿಸಿರುವ ರಾಜ್ಯ ಚುನಾವಣಾಧಿಕಾರಿಯಾಗಿ ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿರುವ ಕ್ಯಾ. ಗಣೇಶ್ ಕಾರ್ಣಿಕ್, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಿರೆಂದು ಆಶಿಸುತ್ತೇನೆಂದು ಹೇಳಿದ್ದಾರೆ.

ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ ಇಂತಿದೆ...

  • ಮೈಸೂರು ಗ್ರಾಮಾಂತರ - ಕೆಎನ್‌ ಸುಬ್ಬಣ್ಣ

  • ಹಾಸನ - ಸಿದ್ದೇಶ್‌ ನಾಗೇಂದ್ರ

  • ಕೊಡಗು - ರವಿ ಕಾಳಪ್ಪ

  • ಉಡುಪಿ - ಕುತ್ಯಾರು ನವೀನ್ ಶೆಟ್ಟಿ

  • ದಾವಣಗೆರೆ - ಎನ್‌ ರಾಜಶೇಖರ

  • ಹಾವೇರಿ - ವಿರೂಪಾಕ್ಷಪ್ಪ ಬಳ್ಳಾರಿ

  • ಚಿತ್ರದುರ್ಗ - ಕೆ.ಟಿ. ಕುಮಾರಸ್ವಾಮಿ

  • ತುಮಕೂರು - ಎಚ್.ಎಸ್. ರವಿಕುಮಾರ್ (ಹೆಬ್ಬಾಕ)

  • ಮಧುಗಿರಿ - ಚಿದಾನಂದ ಗೌಡ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ