ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ 
ರಾಜ್ಯ

ಕೋವಿಡ್‌ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸಿದರೆ ಸೂಕ್ತ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಈವರೆಗೆ 11 ಸಾವು ಸಂಭವಿಸಿವೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ದೀರ್ಘಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಸಾವನ್ನಪ್ಪಿದ್ದಾರೆ.

ಬೆಂಗಳೂರು: ಕೋವಿಡ್‌ ಪರೀಕ್ಷೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳು ಬಂದರೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಬುಧವಾರ ಸಂಜೆ ಪರಿಶೀಲನಾ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಈವರೆಗೆ 11 ಸಾವು ಸಂಭವಿಸಿವೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ದೀರ್ಘಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಸಾವನ್ನಪ್ಪಿದ್ದು, ಸಾವು ಸಂಭವಿಸಿದಾಗ ಅವರಿಗೆ ಕೊರೋನಾ ಪಾಸಿಟಿವ್‌ ಇತ್ತು ಅಷ್ಟೇ ಎಂದು ಹೇಳಿದರು.

ಮತ್ತೊಂದು ಡೆತ್ ಆಡಿಟ್ ವರದಿ ಬರಬೇಕಾಗಿದೆ ಎಂದು ತಿಳಿಸಿದ್ದೀರಿ. ಹೀಗಾಗಿ ಪ್ರತಿ ಬಾರಿ ಕೊರೋನಾ ಸಾವು ಆದಾಗಲೂ ಅದು ಕೊರೋನಾ ಸಾವೇ ಅಥವಾ ಅಲ್ಲವೇ ಎಂಬುದನ್ನು ಸ್ಪಷ್ಟವಾಗಿ ಜನರಿಗೆ ತಿಳಿಸಬೇಕು. ಜನರಲ್ಲಿ ಇರುವ ಆತಂಕವನ್ನು ಕಡಿಮೆ ಮಾಡಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದ್ದು, ಪ್ರತಿದಿನ ಸರಾಸರಿ 500 ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ ಒಟ್ಟಾರೆಯಾಗಿ, ಕಳೆದ 10 ದಿನಗಳಲ್ಲಿ 5,000 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರ ಪರಿಣಾಮವಾಗಿ 862 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇದೂವರೆಗೆ 11 ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ. ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂಬ ಸೂಚನೆ ನೀಡಿದರು.

ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT