ಸೋಮಣ್ಣ 
ರಾಜ್ಯ

ಹೇಮಾವತಿ ಲಿಂಕ್ ಕೆನಾಲ್ ಸ್ಥಳಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ: ಯೋಜನೆ ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹ

ಕಾಮಗಾರಿ ಅವೈಜ್ಞಾನಿಕವಾಗಿದೆ. ಈ ಯೋಜನೆ ಕುರಿತಂತೆ ದೇವೇಗೌಡರು, ಕುಮಾರಸ್ವಾಮಿಯ ಜೊತೆ ಮಾತನಾಡಿ ಯಾರಿಗೂ ಅನ್ಯಾಯವಾಗಬಾರದು ಎಂಬುದನ್ನು ಮನವರಿಕೆ ಮಾಡಿದ್ದೇನೆ.

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಅವೈಜ್ಞಾನಿಕ ಯೋಜನೆಯಾಗಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಬುಧವಾರ ಆಗ್ರಹಿಸಿದರು.

ತಾಲೂಕಿನ ನಿಟ್ಟೂರು ಹೋಬಳಿ ಸುಂಕಪುರ ಬಳಿ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಲ್ ಕಾಮಗಾರಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಮಾತನಾಡಿದ ಅವರು, ಕಾಮಗಾರಿ ಅವೈಜ್ಞಾನಿಕವಾಗಿದೆ. ಈ ಯೋಜನೆ ಕುರಿತಂತೆ ದೇವೇಗೌಡರು, ಕುಮಾರಸ್ವಾಮಿಯ ಜೊತೆ ಮಾತನಾಡಿ ಯಾರಿಗೂ ಅನ್ಯಾಯವಾಗಬಾರದು ಎಂಬುದನ್ನು ಮನವರಿಕೆ ಮಾಡಿದ್ದೇನೆ. ರಾಜ್ಯ ಸರ್ಕಾರ ಪಾಪದ ವ್ಯವಸ್ಥೆಯಲ್ಲಿ ಮುಂಂದಿನ ದಿನಗಳಲ್ಲಿ ಶಾಪಗ್ರಸ್ತವಾಗಬಹುದು ಇದನ್ನು ಅರ್ಥ ಕಾಮಗಾರಿಯನ್ನು ಸ್ಥಗಿತ ಮಾಡಬೇಕು ಎಂದು ಹೇಳಿದರು.

ಗುಬ್ಬಿ ತಾಲೂಕಿಗೆ ಆಗಿರುವಂತ ಅನ್ಯಾಯವನ್ನು ಸರಿಪಡಿಸುವ ಜವಾಬ್ದಾರಿ ನನ್ನದು. ಇದನು ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಸರಿಪಡಿಸುತ್ತೇನೆ. ಕಾಮಗಾರಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರಾವರಿ ಸಚಿವ ಡಿಕೆ ಶಿವಕುಮಾರ್‌ ಜೊತೆ ಮಾತನಾಡುತ್ತೇನೆ. ಅಧಿಕಾರಿಗಳು ನಾನೊಬ್ಬ ಕೇಂದ್ರ ಸಚಿವ ಇದ್ದೇನೆ ಎಂಬುದನ್ನು ಮರೆಯಬಾರದು.

ಒಂದೊಂದು ಸರ್ಕಾರ ಬಂದಾಗ ಒಂದೊಂದು ರೀತಿಯಲ್ಲಿ ಯೋಜನೆ ರೂಪಿಸಿದ್ದಾರೆ. ಇಂದು ಗುಬ್ಬಿ ತಾಲೂಕಿನಲ್ಲಿ ಹೇಮಾವತಿ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ಇದಕ್ಕೆ ನಾವುಗಳು ಪರಿಹಾರ ಹುಡುಕಬೇಕಾಗಿದೆ. ಜನಪರ ಕಾರ್ಯಕ್ರಮಗಳಿಗೆ ಹಕ್ಕುಚ್ಯುತಿಯಾಗುವುದಕ್ಕೆ ವಿ.ಸೋಮಣ್ಣ ಬಿಡುವುದಿಲ್ಲ ಮತ್ತು ಸೋಲುವುದಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಯೋಜನೆ ತುಮಕೂರಿನ ರೈತರ ಮೇಲೆ ಪರಿಣಾಮ ಬೀರುತ್ತಿದ್ದರೂ, ಯೋಜನೆಯ ಪರವಾಗಿ ಕಾರ್ಯಸಾಧ್ಯತಾ ವರದಿಯನ್ನು ನೀಡಿದ ತಜ್ಞರ ಸಮಿತಿ ಮುಖ್ಯಸ್ಥ, ನಿವೃತ್ತ ಎಂಜಿನಿಯರ್ ಜಯಪ್ರಕಾಶ್ ಮತ್ತು ಡಿ.ಕೆ. ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರ ಅವರನ್ನು ಸೋಮಣ್ಣ ಅವರು ತರಾಟೆಗೆ ತೆಗೆದುಕೊಂಡರು.

ಯೋಜನೆಗಾಗಿ ಗುತ್ತಿಗೆದಾರರು ಈಗಾಗಲೇ ನೂರಾರು ಕೋಟಿ ಮೌಲ್ಯದ ಪೈಪ್‌ಗಳನ್ನು ಖರೀದಿಸಿದ್ದು, ಸರ್ಕಾರ ಈಗಾಗಲೇ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಹಚರರಾದ ತುಮಕೂರು ಗ್ರಾಮೀಣ ಶಾಸಕ ಬಿ. ಸುರೇಶ್ ಗೌಡ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಅವರು ಸೋಮಣ್ಣ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ಇರುವುದು ಹಲವರ ಹುಬ್ಬೇರುವಂತೆ ಮಾಡಿತ್ತು. ನಂತರ ವಿಜಯೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ ನಂತರ ಸುರೇಶ್ ಹಾಗೂ ರವಿಶಂಕರ್ ಅವರೂ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ವಿಚಾರ ತಣ್ಣಗಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!

ಬೆಂಗಳೂರು: ತಾಜ್‌ ಹೋಟೆಲ್‌ನಲ್ಲಿ ಘೋರ ಕೃತ್ಯ; ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆಗೈದು ತಂದೆ ಆತ್ಮಹತ್ಯೆಗೆ ಯತ್ನ!

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್; ಮಧು ಬಂಗಾರಪ್ಪ ಜೊತೆ ಪಿಸುಮಾತು ವಿವಾದ; ಬಿ.ವೈ ವಿಜಯೇಂದ್ರ ಸ್ಪಷ್ಟನೆ