ಆಂಬ್ಯುಲೆನ್ಸ್ ಸೇವೆ  
ರಾಜ್ಯ

ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬ್ಯುಲೆನ್ಸ್ ನಿರ್ವಹಣೆ

ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ಭರವಸೆ ಮೂಡಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ. ಉಳಿಸುತ್ತದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ 108 ಆಂಬ್ಯುಲೆನ್ಸ್ ಸೇವೆಯನ್ನು ಆರೋಗ್ಯ ಇಲಾಖೆಯ ನೇರ ನಿರ್ವಹಣೆಯಡಿ ತರುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಹೇಳಿದ್ದಾರೆ.

ಈ ಉಪಕ್ರಮವು 108 ಆಂಬ್ಯುಲೆನ್ಸ್ ಸೇವೆಯನ್ನು ಖಾಸಗಿ ನಿಯಂತ್ರಣದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಡಿ ತರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ಭರವಸೆ ಮೂಡಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ. ಉಳಿಸುತ್ತದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

715 ಆಂಬ್ಯುಲೆನ್ಸ್‌ಗಳ ಸಮೂಹವನ್ನು ನಿರ್ವಹಿಸಲು ರಾಜ್ಯ ಮಟ್ಟದಲ್ಲಿ ಕೇಂದ್ರೀಯ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಸ್ಥಾಪಿಸಲಾಗುವುದು ಮತ್ತು ಇದಕ್ಕಾಗಿ '112 NG-ERSS' ಸಾಫ್ಟ್‌ವೇರ್‌ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 ಕಂಟ್ರೋಲ್ ಸೆಂಟರ್ ಗಳು ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆಂಬ್ಯುಲೆನ್ಸ್ ಗಳಿಗೆ ಚಾಲಕರು ಮತ್ತು ನರ್ಸಿಂಗ್ ಸಿಬ್ಬಂದಿಯನ್ನು ಜಿಲ್ಲಾ ಮಟ್ಟದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಹೊರತಾಗಿ ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಅಂಬ್ಯುಲೆನ್ಸ್ ಗಳನ್ನು ಕೂಡಾ 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT