ಕರ್ನಾಟಕ ಹೈಕೋರ್ಟ್ 
ರಾಜ್ಯ

ಭಾಷಾ ವಿವಾದ: ಕನ್ನಡ ಸಾಹಿತ್ಯ ಪರಿಷತ್ ಅರ್ಜಿ; ಪ್ರತಿಕ್ರಿಯೆ ನೀಡುವಂತೆ 'ಥಗ್ ಲೈಫ್' ನಿರ್ಮಾಪಕರಿಗೆ ಕರ್ನಾಟಕ ಹೈಕೋರ್ಟ್ ಸೂಚನೆ

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಕರಣವನ್ನು ಜೂನ್ 20ಕ್ಕೆ ಮುಂದೂಡಿದರು.

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಕಮಲ್ ಹಾಸನ್ ಇನ್ನೂ ಕ್ಷಮೆಯಾಚಿಸಿಲ್ಲ ಎಂದು ಶುಕ್ರವಾರ ಕರ್ನಾಟಕ ಹೈಕೋರ್ಟ್ ಗಮನಿಸಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯಿಸುವಂತೆ ಅವರ ಇತ್ತೀಚಿನ ಚಿತ್ರ 'ಥಗ್ ಲೈಫ್' ಚಿತ್ರದ ನಿರ್ಮಾಪಕರಿಗೆ ಸೂಚಿಸಿದೆ.

ರಾಜ್ಯದಲ್ಲಿ ಚಿತ್ರ ಬಿಡುಗಡೆಗೆ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ನಿರ್ಮಾಪಕರು ಅರ್ಜಿ ಸಲ್ಲಿಸಿದ್ದು, ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಅನುಮತಿ ನೀಡುವಂತೆ ಕೋರಲಾಗಿದೆ.

ಕಮಲ್ ಹಾಸನ್ ಅವರ ಹೇಳಿಕೆಗಳಿಂದ, ವಿಶೇಷವಾಗಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಗುರುತು, ಘನತೆ ಮತ್ತು ಐತಿಹಾಸಿಕ ಪರಂಪರೆಯನ್ನು ರಕ್ಷಿಸುವ ದೃಷ್ಟಿಕೋನದಿಂದ ಉದ್ಭವಿಸುವ ಸಾಂವಿಧಾನಿಕ, ಸಾಂಸ್ಕೃತಿಕ ಮತ್ತು ಭಾಷಾ ಕಾಳಜಿಗಳನ್ನು ನ್ಯಾಯಾಲಯದ ಮುಂದೆ ಇಡಲು ಪರಿಷತ್ ಬಯಸಿದೆ.

ಚಿತ್ರದ ಆಡಿಯೋ ಬಿಡುಗಡೆ ಸಂದರ್ಭದಲ್ಲಿ ಕಮಲ್ ಹಾಸನ್ ಅವರು ಕನ್ನಡ ತಮಿಳು ಭಾಷೆಯಿಂದ ಹುಟ್ಟಿದೆ ಎಂದು ಹೇಳಿದ್ದರು. ಇದು ಕರ್ನಾಟಕದಲ್ಲಿ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

ಕನ್ನಡ ಪರ ಸಂಘಟನೆಗಳ ನಾಯಕರು ಮತ್ತು ರಾಜ್ಯದ ಚಲನಚಿತ್ರ ಮಂಡಳಿಯು ನಟ ಕಮಲ್ ಹಾಸನ್ ತನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿತು. ಆದರೆ, ನಟ ಕ್ಷಮೆಯಾಚಿಸಲು ನಿರಾಕರಿಸಿದರು ಮತ್ತು ಜೂನ್ 5ರಂದು ವಿಶ್ವದಾದ್ಯಂತ ಬಿಡುಗಡೆಯಾದಾಗ ಕರ್ನಾಟಕದಲ್ಲಿ ಚಿತ್ರ ಬಿಡುಗಡೆಗೆ ನಿಷೇಧ ಹೇರಲಾಯಿತು.

ಶುಕ್ರವಾರ, ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಪರ ವಕೀಲರು, ಕನ್ನಡ ಸಾಹಿತ್ಯ ಪರಿಷತ್ತಿನ ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ನಟನಿಗೆ ಒಂದು ವಾರದ ಸಮಯ ಬೇಕಾಗುತ್ತದೆ ಎಂದು ಅರ್ಜಿ ಸಲ್ಲಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಕರಣವನ್ನು ಜೂನ್ 20ಕ್ಕೆ ಮುಂದೂಡಿದರು.

ಇದಕ್ಕೂ ಮೊದಲು, ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ರಾಜ್ಯದಲ್ಲಿ ಚಿತ್ರ ಬಿಡುಗಡೆಗೆ ಭದ್ರತೆ ಕೋರಿ ಅರ್ಜಿ ಸಲ್ಲಿಸಿತ್ತು.

ಜೂನ್ 3ರಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಮುಂದೆ ಈ ಅರ್ಜಿಯು ವಿಚಾರಣೆಗೆ ಬಂದಾಗ, ಅರ್ಜಿದಾರರ ಪರ ವಕೀಲರು ಯಾವುದೇ ದುರುದ್ದೇಶಪೂರಿತ ಕೃತ್ಯ ಇದಾಗಿಲ್ಲ. ಹೀಗಾಗಿ, ಕ್ಷಮೆಯಾಚಿಸುವ ಅಗತ್ಯವಿಲ್ಲ ಮತ್ತು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯದಲ್ಲಿ ಚಿತ್ರ ಪ್ರದರ್ಶನಕ್ಕೆ ಒತ್ತಾಯಿಸಲಾಗುವುದಿಲ್ಲ ಎಂದು ವಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT