Indigo flight 
ರಾಜ್ಯ

ಏರ್‌ ಇಂಡಿಯಾ ವಿಮಾನ ಪತನ: ಬೆಂಗಳೂರು-ಅಹಮದಾಬಾದ್‌ ಇಂಡಿಗೋ ವಿಮಾನ ಹಾರಾಟ ರದ್ದು

ಬೆಂಗಳೂರಿನಿಂದ ಅಹಮದಾಬಾದ್‌ಗೆ ಹೋಗಬೇಕಿದ್ದ ಇಂಡಿಗೋ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (BLR) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ AI171 ಅಪಘಾತದ ನಂತರ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ-ಅಹಮದಾಬಾದ್'ಗೆ ತೆರಳಬೇಕಿದ್ದ ವಿಮಾನಗಳ ಹಾರಾಟವನ್ನೂ ರದ್ದುಗೊಳಿಸಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ,

ಬೆಂಗಳೂರಿನಿಂದ ಅಹಮದಾಬಾದ್‌ಗೆ ಹೋಗಬೇಕಿದ್ದ ಇಂಡಿಗೋ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (BLR) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ, ಬೆಂಗಳೂರಿನಿಂದ ಅಹಮದಾಬಾದ್‌ಗೆ ಹೋಗುವ ಇತರ ವಿಮಾನಗಳ ಹಾರಾಟದ ಮೇಲೆ ಯಾವುದೇ ಪರಿಣಾಮವಿಲ್ಲ ಎಂದು ದೃಢಪಡಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಜೂನ್‌12ರಂದು ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದೆ. ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಮಾಡಿದ ಕೆಲವೇ ಕ್ಷಣಗಳಲ್ಲಿ ಈ ದುರಂತ ಸಂಭವಿಸಿದೆ. ಜನನಿಬಿಡ ಪ್ರದೇಶವಾದ ಮೇಘಾನಿ ನಗರದ ದುರಂತ ಸಂಭವಿಸಿದ್ದು, ದುರ್ಘಟನೆಯಲ್ಲಿ 241 ಮಂದಿ ದುರ್ಮರಣವನ್ನಪ್ಪಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ- ಟ್ರಂಪ್

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ಅನುದಾನ: ಕಾವೇರಿ ಆರತಿ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ; ಡಿ.ಕೆ. ಶಿವಕುಮಾರ್

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

SCROLL FOR NEXT