ವೀರಪ್ಪ ಮೊಯ್ಲಿ 
ರಾಜ್ಯ

ನಿವೃತ್ತ ನ್ಯಾಯಾಧೀಶರಿಂದ ಒಂದು ತನಿಖೆ ನಡೆಸಿ, ವರದಿ ತರಿಸಿ ಕ್ರಮ ತೆಗೆದುಕೊಳ್ಳಿ: ಸಿಎಂಗೆ ವೀರಪ್ಪ ಮೊಯ್ಲಿ ಪತ್ರ

ಕಾಲ್ತುಳಿತದ ಆಕಸ್ಮಿಕ ಘಟನೆಯಿಂದ ಅನೇಕ ದಶಕಗಳಿಂದ ಗಳಿಸಿದ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಅಳಿಸಿಹಾಕಬಾರದು. ಈ ಬಗ್ಗೆ ವಿಶೇಷವಾದ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳುವ ಅನಿವಾರ್ಯತೆಯಿದೆ.

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ವಿವಿಧ ತನಿಖೆ ನಡೆಸುವ ಬದಲು ನಿವೃತ್ತ ನ್ಯಾಯಾಧೀಶರಿಂದ ಒಂದೇ ತನಿಖೆ ನಡೆಸಬೇಕು. ತಕ್ಷಣ ವರದಿ ತರಿಸಿ ಸಾರ್ವಜನಿಕರು ಮತ್ತು ಕ್ರಿಕೆಟ್ ಪ್ರೇಮಿಗಳಲ್ಲಿ ವಿಶ್ವಾಸ ಮೂಡಿಸಲು ಸರಕಾರ ಕ್ರಮ ವಹಿಸಬೇಕು ಎಂದು ಕೋರಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯ್ಲಿ ಪತ್ರ ಬರೆದಿದ್ದಾರೆ.

ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಎರಡು ಪುಟಗಳ ಪತ್ರ ಬರೆದಿರುವ ವೀರಪ್ಪ ಮೊಯ್ಲಿ, ಕಾಲ್ತುಳಿತ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಮೂರು ತನಿಖೆ ನಡೆಸಲಾಗುವುದು ಎಂದು ಪ್ರಕಟಿಸಿರುವುದು ಸರಿಯಲ್ಲ. ಇದರಿಂದ ಸರಕಾರದ ಆಡಳಿತಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆಗಳಿವೆ. ಹೀಗಾಗಿ ಈ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಕಾಲ್ತುಳಿತದ ಆಕಸ್ಮಿಕ ಘಟನೆಯಿಂದ ಅನೇಕ ದಶಕಗಳಿಂದ ಗಳಿಸಿದ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಅಳಿಸಿಹಾಕಬಾರದು. ಈ ಬಗ್ಗೆ ವಿಶೇಷವಾದ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳುವ ಅನಿವಾರ್ಯತೆಯಿದೆ. ದುರ್ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆಯ ಮೇಲೆಯೇ ಕೆಟ್ಟ ಹೆಸರು ಬಂದಿದೆ. ಆ ಕೆಟ್ಟ ಹೆಸರನ್ನು ಅಳಿಸಿಹಾಕಬೇಕು ಎಂದು ವೀರಪ್ಪ ಮೊಯ್ಲಿ ಸಲಹೆ ನೀಡಿದ್ದಾರೆ.

ಆರ್‌ಸಿಬಿ ವಿಜಯೋತ್ಸವವನ್ನು ಸಂಭ್ರಮಿಸುವ ಬದಲು ಬೆಟ್ಟು ತೋರಿಸುವ ಪ್ರಕ್ರಿಯೆ ನಡೆದಿದೆ, ಇದು ಸಲ್ಲದು. ಕಾಲ್ತುಳಿತದಲ್ಲಿ ಅಸುನೀಗಿದವರ ಕುಟುಂಬದ ಸದಸ್ಯರು ಹಾಗೂ ಗಾಯಾಳುಗಳಲ್ಲಿ ವಿಶ್ವಾಸ ಮೂಡಿಸಬೇಕು. ಅಲ್ಲದೆ, ಕ್ರಿಕೆಟ್ ಪ್ರೇಮಿಗಳಲ್ಲಿಯೂ ಸುರಕ್ಷತೆಯ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕ್ಷಿಪ್ರ ಗತಿಯಲ್ಲಿ ಪ್ರಕರಣದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು’ ಎಂದು ವೀರಪ್ಪ ಮೊಯ್ಲಿ ಕೋರಿದ್ದಾರೆ.

ಪರಿಹಾರ ನೀಡುವುದು ಮಾತ್ರ ಸಾಕಾಗುವುದಿಲ್ಲ, ಸಂತ್ರಸ್ತರ ಮತ್ತು ಗಾಯಗೊಂಡವರ ಕುಟುಂಬಗಳ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಅವರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು. ಬೆಂಗಳೂರಿನಿಂದ ಬೇರೆ ಸ್ಥಳಗಳಿಗೆ ಕ್ರಿಕೆಟ್ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಹರಡುತ್ತಿರುವ ಊಹಾಪೋಹಗಳನ್ನು ಅನಾರೋಗ್ಯಕರ ಎಂದು ಬಣ್ಣಿಸಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಯೋಜಿಸುವ ಭರವಸೆ ನೀಡಬೇಕು ಎಂದು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

SCROLL FOR NEXT