ಆಗುಂಬೆ ಘಾಟ್ ರಸ್ತೆ 
ರಾಜ್ಯ

ಆಗುಂಬೆ ಘಾಟ್ ನಲ್ಲಿ ನಾಳೆಯಿಂದ ಮೂರುವರೆ ತಿಂಗಳು ಭಾರೀ ವಾಹನ ಸಂಚಾರಕ್ಕೆ ನಿಷೇಧ

ಉಡುಪಿ, ಕುಂದಾಪುರ ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಭಾರೀ ವಾಹನಗಳು ಸಂಚರಿಸುವಂತೆ ಸೂಚಿಸಲಾಗಿದೆ.

ಶಿವಮೊಗ್ಗ: ಭಾರೀ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಹೀಗಾಗಿ ನಾಳೆಯಿಂದ ಬರೋಬ್ಬರಿ ಮೂರುವರೆ ತಿಂಗಳುಗಳ ಕಾಲ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ಇರುವುದಿಲ್ಲ. ಕೇವಲ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಉಡುಪಿ, ಕುಂದಾಪುರ ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಭಾರೀ ವಾಹನಗಳು ಸಂಚರಿಸುವಂತೆ ಸೂಚಿಸಲಾಗಿದೆ.

ಆಗುಂಬೆ ಘಾಟ್ 169ಎ ಹೆದ್ದಾರಿಯನ್ನು ಬಂದ್ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ. ಮಲ್ಪೆ ಆಗುಂಬೆ ಹೆದ್ದಾರಿಯ ಭಾಗವಾಗಿರುವ ಆಗುಂಬೆ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ಭಾರೀ ವಾಹನಗಳು ಪರ್ಯಾಯ ಮಾರ್ಗವನ್ನು ಬಳಸಬೇಕೆಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗ್ಡೆ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ