5 ಲಕ್ಷ ರೂ. ಪರಿಹಾರ ವಿತರಿಸಿದ ಸಂತೋಷ್ ಲಾಡ್ 
ರಾಜ್ಯ

ಹುಬ್ಬಳ್ಳಿ: ಮೃತ ಹುಸೇನಸಾಬ್ ಕಳಸ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ವಿತರಿಸಿದ ಸಂತೋಷ್ ಲಾಡ್

ಹುಬ್ಬಳ್ಳಿ ಹೊರವಲಯದ ಮಾವನೂರು ರಸ್ತೆಯ ಬಳಿ ಬುಧವಾರ ರಾತ್ರಿ ಹುಸೇನಸಾಬ್ ಅವರು ಮಳೆನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ.

ಹುಬ್ಬಳ್ಳಿ: ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದ ಹುಸೇನಸಾಬ್ ಕಳಸ ಕುಟುಂಬದ ಸದಸ್ಯರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಶನಿವಾರ 5 ಲಕ್ಷ ರೂ. ಪರಿಹಾರದ ಆದೇಶವನ್ನು ಹಸ್ತಾಂತರಿಸಿದರು.

ಹುಬ್ಬಳ್ಳಿ ಹೊರವಲಯದ ಮಾವನೂರು ರಸ್ತೆಯ ಬಳಿ ಬುಧವಾರ ರಾತ್ರಿ ಹುಸೇನಸಾಬ್ ಅವರು ಮಳೆನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದರು.

ಇಂದು ಹುಸೇನಸಾಬ್ ಅವರ ಮನೆಗೆ ತೆರಳಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ಪರಿಹಾರದ ಆದೇಶದ ಪ್ರತಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್ ಲಾಡ್, ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಇಲ್ಲಿಯವರೆಗೆ ಒಟ್ಟು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಬೆಳೆ ನಷ್ಟದ ಬಗ್ಗೆ ಸರ್ವೇ ಮಾಡಬೇಕಾಗಿದೆ ಎಂದು ತಿಳಿಸಿದರು. ಅಲ್ಲದೆ ಸರ್ವೇ ಮುಗಿದ ನಂತರ, ಅದನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಜೂನ್ 12 ರಂದು, ಹುಬ್ಬಳ್ಳಿಯ ಹೊರವಲಯದ ಮಾವನೂರು ರಸ್ತೆಯ ಬಳಿಯ ತಗ್ಗು ಪ್ರದೇಶದಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆ ಮತ್ತು ಬಲವಾದ ಗಾಳಿಯ ನಂತರ, ಹುಸೇನಸಾಬ್ ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದಾರೆ.

ಇನ್ನು ಹೆಚ್ಚಿನ ಮಳೆಯಾದಗ ಬೆಣ್ಣೆಹಳ್ಳದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಪ್ರತಿ ಬಾರಿ ಕೂಡಾ ಸಾವಿರಾರು ಎಕರೆಯಲ್ಲಿ ಬೆಳದಿದ್ದ ಬೆಳೆ ಹಾಳಾಗಿ ಹೋಗುತ್ತದೆ. ಹೀಗಾಗಿ ಬೆಣ್ಣೆಹಳ್ಳದಲ್ಲಿ ಉಂಟಾಗುತ್ತಿರುವ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಲ್ಪಿಸುವುದರ ಜೊತೆಗೆ, ಬೆಳೆಹಾನಿಯಾದ ರೈತರಿಗೆ ಪರಿಹಾರ ಕೊಡಿಸುವ ಕೆಲಸ ಕೂಡಾ ಆಗಬೇಕಿದೆ ಎಂದು ಸಚಿವರು ಹೇಳಿದ್ದಾರೆ.

ಘಟನೆಯ ಕುರಿತು ಎಎನ್‌ಐ ಜೊತೆ ಮಾತನಾಡಿದ ಹುಬ್ಬಳ್ಳಿ ತಾಲೂಕು ತಹಶೀಲ್ದಾರ್ ಕಲ್ಲನಗೌಡ ಪಾಟೀಲ್ , "ಆ ವ್ಯಕ್ತಿಯನ್ನು ಪತ್ತೆಹಚ್ಚಲು ಅಗ್ನಿಶಾಮಕ ದಳದವರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ 10 ಗಂಟೆಗಳಿಂದ ಕಾರ್ಯಾಚರಣೆ ಮುಂದುವರೆದಿದೆ. ನಿನ್ನೆ ರಾತ್ರಿ ಸುಮಾರು 150 ಮಿ.ಮೀ ಮಳೆಯಾಗಿದೆ. ಇಂದು ಹುಬ್ಬಳ್ಳಿಯಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಬುಧವಾರ ಭಾರೀ ಮಳೆಯ ನಂತರ ತನ್ನ ಜಮೀನಿಗೆ ತೆರಳಿದ್ದ ಕಾಣೆಯಾದ ಹುಸೇನಸಾಬ್ ಅವರ ಚಪ್ಪಲಿಗಳು ಪತ್ತೆಯಾಗಿವೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ?; IMD ಎಚ್ಚರಿಕೆ

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ 28 ಕೋಟಿ ರೂ. ಖರ್ಚು, ಯಾವುದಕ್ಕೆ ಎಷ್ಟು ಖರ್ಚು? ಇಲ್ಲಿದೆ ಮಾಹಿತಿ

ಒಡಿಶಾದ ರೂರ್ಕೆಲಾ ಬಳಿ ಸಣ್ಣ ವಿಮಾನ ಪತನ; ಪೈಲಟ್ ಸೇರಿ ಆರು ಜನರಿಗೆ ಗಂಭೀರ ಗಾಯ

ಬಾಂಬ್ ದಾಳಿ ಆತಂಕ: ಮಣಿಪುರ ಕಣಿವೆಯಲ್ಲಿ ಪೆಟ್ರೋಲ್ ಪಂಪ್‌ಗಳು ಅನಿರ್ದಿಷ್ಟಾವಧಿಗೆ ಬಂದ್!

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

SCROLL FOR NEXT