ಲೋಕಾಯುಕ್ತ ಪೊಲೀಸ್  
ರಾಜ್ಯ

ಲೋಕಾಯುಕ್ತ ದಾಳಿ ಭೀತಿ: ಅಧಿಕಾರಿಗಳಿಂದ ಕೋಟಿಗಟ್ಟಲೆ ಸುಲಿಗೆ ಮಾಡಿದ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದ ಮಾಜಿ ಪೊಲೀಸ್!

ಕೇಂದ್ರೀಕೃತ ಮತ್ತು ವಿಕೇಂದ್ರೀಕೃತ ಕ್ರಿಪ್ಟೋಕರೆನ್ಸಿ ವಹಿವಾಟಿನ ಮೂಲಕ ನಿಂಗಪ್ಪ ಹೂಡಿಕೆ ಮಾಡಿದ ಒಟ್ಟು ಮೊತ್ತ ಎಷ್ಟೆಂದು ಖಚಿತಪಡಿಸಿಕೊಳ್ಳಲು ಲೋಕಾಯುಕ್ತ ಪೊಲೀಸರು ಸುಮಾರು 25 ಕಂಪನಿಗಳಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಲೋಕಾಯುಕ್ತ ಪೊಲೀಸರ ಸಂಭಾವ್ಯ ದಾಳಿಗಳ ಬಗ್ಗೆ ಮಾಹಿತಿ ಸೋರಿಕೆ ಮಾಡುವ ಮೂಲಕ ಸಂಗ್ರಹಿಸಿದ ಹಲವಾರು ಕೋಟಿ ರೂಪಾಯಿಗಳನ್ನು ಮಾಜಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಕ್ರಿಪ್ಟೋಕರೆನ್ಸಿಯಾಗಿ ಪರಿವರ್ತಿಸಿದ ಆರೋಪವಿದೆ. ಲೋಕಾಯುಕ್ತ ಕಚೇರಿಯೊಳಗಿನ ತನ್ನ ಮಾಹಿತಿ ಮೂಲಗಳಿಂದ ತಮ್ಮ ಮೇಲೆ ನಡೆಯಬಹುದಾಗಿದ್ದ ದಾಳಿ ಬಗ್ಗೆ ಈ ಮಾಜಿ ಪೊಲೀಸ್ ಅಧಿಕಾರಿಗೆ ಮಾಹಿತಿ ಸಿಕ್ಕಿತ್ತು.

ಜೂನ್ 2 ರಂದು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರು ಬಂಧಿಸಿದ ಚಿತ್ರದುರ್ಗದ ನಿಂಗಪ್ಪ ಸಾವಂತ್ (46ವ) ಅಲಿಯಾಸ್ ಜಿ. ನಿಂಗಪ್ಪ ಅವರ ವಿಚಾರಣೆ ವೇಳೆ, ಸರ್ಕಾರಿ ಅಧಿಕಾರಿಗಳಿಂದ ಸುಲಿಗೆ ಮಾಡಿದ್ದಾನೆ ಎಂದು ಹೇಳಲಾದ ಹಣವನ್ನು ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲವು ಐಪಿಎಸ್ ಅಧಿಕಾರಿಗಳ ಹೆಸರುಗಳು ಸೇರಿದಂತೆ ಬಹು ಹೆಸರುಗಳಲ್ಲಿ ನೋಂದಾಯಿಸಲಾದ ಕ್ರಿಪ್ಟೋಕರೆನ್ಸಿ ವ್ಯಾಲೆಟ್‌ಗಳಲ್ಲಿ ಹೂಡಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾನೆ.

ಕೇಂದ್ರೀಕೃತ ಮತ್ತು ವಿಕೇಂದ್ರೀಕೃತ ಕ್ರಿಪ್ಟೋಕರೆನ್ಸಿ ವಹಿವಾಟಿನ ಮೂಲಕ ನಿಂಗಪ್ಪ ಹೂಡಿಕೆ ಮಾಡಿದ ಒಟ್ಟು ಮೊತ್ತ ಎಷ್ಟೆಂದು ಖಚಿತಪಡಿಸಿಕೊಳ್ಳಲು ಲೋಕಾಯುಕ್ತ ಪೊಲೀಸರು ಸುಮಾರು 25 ಕಂಪನಿಗಳಿಗೆ ಪತ್ರ ಬರೆದಿದ್ದಾರೆ. ಚಿತ್ರದುರ್ಗದಲ್ಲಿ ನಿಯೋಜನೆಗೊಂಡಿದ್ದ ನಿಂಗಪ್ಪನನ್ನು ಕೆಲವು ವರ್ಷಗಳ ಹಿಂದೆ ಸೇವೆಯಿಂದ ವಜಾಗೊಳಿಸಲಾಗಿತ್ತು.

ನಿಂಗಪ್ಪನ ಮೊಬೈಲ್ ಫೋನ್ ನ್ನು ಸಿಐಡಿ ಸೈಬರ್ ವಿಭಾಗಕ್ಕೆ ಕ್ರಿಪ್ಟೋಕರೆನ್ಸಿ ವಹಿವಾಟುಗಳ ಪರಿಶೀಲನೆಗಾಗಿ ಕಳುಹಿಸಲಾಗಿದೆ. ಆರಂಭಿಕ ತನಿಖೆಯಲ್ಲಿ ಅವರು ಬೈನಾನ್ಸ್ ಮತ್ತು ಬಿಟ್‌ಗೆಟ್ ಸೇರಿದಂತೆ ಎಂಟು ಕ್ರಿಪ್ಟೋಕರೆನ್ಸಿ ವಿನಿಮಯ ವೇದಿಕೆಗಳಲ್ಲಿ 4.19 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನಿಂಗಪ್ಪ ಹೆಸರಿನಲ್ಲಿ, ಆತನ ಪತ್ನಿ ಚಂದ್ರಕಲಾ ಹೆಸರಿನಲ್ಲಿ ಮತ್ತು ಕೆಲವು ಅಧಿಕಾರಿಗಳ ಹೆಸರಿನಲ್ಲಿ ಹೂಡಿಕೆ ಮಾಡಲಾಗಿದೆ. ಲೋಕಾಯುಕ್ತ ಪೊಲೀಸರು ಚಿತ್ರದುರ್ಗದಲ್ಲಿರುವ ಅವರ ನಿವಾಸದಿಂದ ಸುಮಾರು 90 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಹಲವಾರು ಅಪರಾಧ ದಾಖಲೆಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

ವ್ಯವಹಾರ ಹೇಗೆ ಮಾಡುತ್ತಿದ್ದನು?

ನಿಂಗಪ್ಪನ ಕಾರ್ಯ ವಿಧಾನವೆಂದರೆ ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ಮತ್ತು ಲೋಕಾಯುಕ್ತರ ಹೆಸರಿನಲ್ಲಿ ಫೋನ್ ಸಂಖ್ಯೆಯನ್ನು ಉಳಿಸುವುದು, ಲೋಕಾಯುಕ್ತದಲ್ಲಿರುವ ತನ್ನ 'ಮೂಲಗಳಿಂದ' ತನಗೆ ಹೆಸರುಗಳು ಸೋರಿಕೆಯಾದ ಅಧಿಕಾರಿಗಳಿಗೆ ಸ್ಕ್ರೀನ್‌ಶಾಟ್‌ಗಳನ್ನು ಕಳುಹಿಸುತ್ತಿದ್ದನು. ಉನ್ನತ ಅಧಿಕಾರಿಗಳೊಂದಿಗೆ ನಿಕಟ ಸಂಬಂಧ ಹೊಂದಿದ್ದೇನೆ ಎಂಬ ಭಾವನೆ ಮೂಡಿಸುತ್ತಿದ್ದನು. "ಇಂದು ಬೆಳಗ್ಗೆ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ. ಜಾಗರೂಕರಾಗಿರಿ" ಎಂಬಂತಹ ಎಚ್ಚರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದನು.

ವಿಚಾರಣೆಗಾಗಿ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾದ ಅಬಕಾರಿ ಅಧಿಕಾರಿಗಳ ಪ್ರಕಾರ, ನಿಂಗಪ್ಪ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅವುಗಳನ್ನು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಲೋಕಾಯುಕ್ತದಿಂದ ನಿರ್ದಿಷ್ಟ ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ಉಳಿಸಿದ್ದನು. ಅಧಿಕಾರಿಗಳನ್ನು ಸಂಪರ್ಕಿಸಿದಾಗ ಈ ಹೆಸರುಗಳು ಕಾಲರ್ ಐಡಿ ಅಪ್ಲಿಕೇಶನ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದವು, ಇದು ಅನುಮಾನಗಳನ್ನು ಹುಟ್ಟುಹಾಕಿದವು.

ಅನುಮಾನ ಹುಟ್ಟುಕೊಂಡಿದ್ದು ಹೇಗೆ?

ಅಬಕಾರಿ ಇಲಾಖೆ, ಪ್ರಾದೇಶಿಕ ಸಾರಿಗೆ ಕಚೇರಿಗಳು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು 20,000 ರಿಂದ 25 ಲಕ್ಷ ರೂಪಾಯಿಗಳವರೆಗೆ ಹಣವನ್ನು ಸಂಗ್ರಹಿಸಿದ್ದನು ಎಂದು ಆರೋಪಿಸಲಾಗಿದೆ. ತನಿಖೆಯಿಂದ ತಿಳಿದು ಬಂದಿರುವ ಪ್ರಕಾರ, ಆತ ಅಬಕಾರಿ ಅಧಿಕಾರಿಗಳಿಂದಲೇ ಸುಮಾರು 58 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿದ್ದಾನೆ. ಲೋಕಾಯುಕ್ತ ಪ್ರಧಾನ ಕಚೇರಿಗೆ ಆಗಾಗ್ಗೆ ಭೇಟಿ ನೀಡುವುದು ಅನುಮಾನಗಳನ್ನು ಹುಟ್ಟುಹಾಕಿತು.

ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ್ದಾನೆಂದು ಹೇಳಿಕೊಳ್ಳುವ ಯಾರೋ ಸರ್ಕಾರಿ ಅಧಿಕಾರಿಗಳಿಗೆ ಅನುಮಾನಾಸ್ಪದ ಕರೆಗಳು ಬರುತ್ತಿವೆ ಎಂದು ಲೋಕಾಯುಕ್ತ ಪೊಲೀಸರಿಗೆ ಮಾಹಿತಿದಾರರು ಮಾಹಿತಿ ನೀಡಿದ ನಂತರ ನಿಂಗಪ್ಪ ಲೋಕಾಯುಕ್ತ ಸಬ್-ಇನ್ಸ್‌ಪೆಕ್ಟರ್ ಆಗಿ ನಾಟಕೀಯತೆ ಮಾಡುತ್ತಿರುವುದು ಬೆಳಕಿಗೆ ಬಂತು. ಬೆಂಗಳೂರಿನಲ್ಲಿರುವ ಲೋಕಾಯುಕ್ತ ಪ್ರಧಾನ ಕಚೇರಿಗೆ ನಿಂಗಪ್ಪ ನಿಯಮಿತವಾಗಿ ಭೇಟಿ ನೀಡುತ್ತಿದ್ದನು. ಕೆಲವು ಐಪಿಎಸ್ ಅಧಿಕಾರಿಗಳನ್ನು ಭೇಟಿಯಾಗುತ್ತಿದ್ದನು.

ನಿಂಗಪ್ಪನನ್ನು ಗುರಿಯಿಟ್ಟುಕೊಂಡ ಅಧಿಕಾರಿಗಳನ್ನು ಸಂಪರ್ಕಿಸಿ ದಾಳಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಲು ಹಣ ಕೇಳುತ್ತಿದ್ದನು. ಕೆಲವು ಸಂದರ್ಭಗಳಲ್ಲಿ, ಯುಪಿಐ ವರ್ಗಾವಣೆಯ ಮೂಲಕ ಲಂಚವನ್ನು ಪಡೆಯುತ್ತಿದ್ದನು. ನಂತರ ಮಧ್ಯವರ್ತಿಗಳಿಗೆ ಹಣವನ್ನು ಹಸ್ತಾಂತರಿಸುತ್ತಿದ್ದನು. ಡಿಜಿಟಲ್ ರೂಪದಲ್ಲಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದನು. ನಂತರ ಅದನ್ನು ಡಾಲರ್‌ಗಳಾಗಿ ಪರಿವರ್ತಿಸಿ ಕ್ರಿಪ್ಟೋಕರೆನ್ಸಿ ವ್ಯಾಲೆಟ್‌ಗಳಿಗೆ ವರ್ಗಾಯಿಸಲಾಗುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT