ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ನೀಡುವ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಪೂರ್ಣಗೊಳಿಸಲು ಪಶ್ಚಿಮ ವಲಯದ ವ್ಯಾಪ್ತಿಯ ಪ್ರತಿ ಮನೆಗೆ ಸಿಕ್ಕರ್ ಅಂಟಿಸಲು ವಲಯ ಆಯುಕ್ತ ಸುರಾಳ್ಕರ್ ವಿಕಾಸ್ ಕಿಶೋರ್ ಅವರು ಅಧಿಕಾರಿಗಳಿಗೆ ಶನಿವಾರ ಸೂಚನೆ ನೀಡಿದರು.
ಸಮೀಕ್ಷೆ ಕುರಿತು ಶನಿವಾರ ಪಶ್ಚಿಮ ವಲಯ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸಮೀಕ್ಷೆ ಪೂರ್ಣಗೊಳಿಸಲು ಎಲ್ಲ ಮನೆಗಳಿಗೆ ಸಿಕ್ಕರ್ ಅಂಟಿಸಿದರೆ ಸರ್ವೇ ಮಾಡಬೇಕಿರುವ ಮನೆಗಳನ್ನು ಸುಲಭವಾಗಿ ಗುರುತಿಸಬಹುದಾಗಿರುತ್ತದೆ. ಈ ನಿಟ್ಟಿನಲ್ಲಿ ಕೂಡಲೇ ಎಲ್ಲ ಮನೆಗಳಿಗೆ ಭೇಟಿ ನೀಡಿ ಸ್ಪಿಕ್ಟರ್‌ಗಳನ್ನು ಅಂಟಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಕ್ಕರ್ ಅಂಟಿಸುವ ವೇಳೆ ಸರ್ವೇ ಆಗಿದೆಯೇ ಇಲ್ಲವೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಅದಕ್ಕಾಗಿ ಎನ್ಎಸ್ಎಸ್, ಎಸಿಸಿ, ನೋಂದಾಯಿತ ಸಂಸ್ಥೆಗಳ ಸಹಯೋಗ ಪಡೆಯಬೇಕು. ಬೆಸ್ಕಾಂ, ಜಲಮಂಡಳಿಯ ದತ್ತಾಂಶ ಆಧಾರದ ಮೇಲೆ ಸಮೀಕ್ಷೆ ಕಾರ್ಯವನ್ನು ಪರಿಶೀಲಿಸಿ, ಬಾಕಿ ಸಮೀಕ್ಷೆ ಮಾಡಬೇಕಿರುವುದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಸಮೀಕ್ಷಾ ಕಾರ್ಯದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸುವ ಉದ್ದೇಶದಿಂದ ಜೂನ್ 22ರ ವರೆಗೆ ಅವಧಿ ವಿಸ್ತರಿಸಿ, ನಾಗರೀಕ ಸೇವಾ ಕೇಂದ್ರಗಳಾದ, 'ಕರ್ನಾಟಕ ಒನ್' 'ಬೆಂಗಳೂರು ಒನ್' ಮತ್ತು 'ಗ್ರಾಮ ಒನ್' ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಮೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಲಿಕೆ ವ್ಯಾಪ್ತಿಯ ಎಲ್ಲ ವಾರ್ಡ್ ಕಚೇರಿಗಳಲ್ಲಿ ಪ್ರತ್ಯೇ ಕವಾದ ಶಿಬಿರಗಳ ವ್ಯವಸ್ಥೆ ಮಾಡಲಾಗಿದೆ.
ಇನ್ನೂ ಸ್ವಯಂ ಪ್ರೇರಿತವಾಗಿ ಆನ್ ಲೈನ್ ಮೂಲಕ https:// schedulecastesurvey.karnataka. gov.in/selfdeclaration/ ಸಮೀಕ್ಷೆ ಯಲ್ಲಿ ಪಾಲ್ಗೊಳ್ಳಬಹುದಾಗಿದೆ ಮಾಹಿತಿ ನೀಡಿದರು.