ಪ್ರಜ್ವಲ್ ಮತ್ತು ಸಹನಾ 
ರಾಜ್ಯ

ನೆಲಮಂಗಲ: ಬೈಕ್ ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಡ್ಯಾನ್ಸರ್ಸ್​ ಸ್ಥಳದಲ್ಲೇ ಸಾವು

ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ.

ಬೆಂಗಳೂರು: ನೆಲಮಂಗಲದ ಕುಣಿಗಲ್ ಬೈಪಾಸ್​ನಲ್ಲಿ ಸೋಮವಾರ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್​ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್​​ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್​​ ಒಂದನ್ನು ಮುಗಿಸಿಕೊಂಡು ಕುಣಿಗಲ್​ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.

ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!