ಸಾಂದರ್ಭಿಕ ಚಿತ್ರ 
ರಾಜ್ಯ

ಉತ್ತರ ಕನ್ನಡ: ದಲಿತ ಮಹಿಳೆಗೆ ಲೈಂಗಿಕ ದೌರ್ಜನ್ಯ, ದರೋಡೆ; ಆರೋಪಿ ಫೈರೋಜ್ ಕಾಲಿಗೆ ಗುಂಡಿಕ್ಕಿ ಬಂಧನ!

ಜೂನ್ 12 ರಂದು ಮಹಿಳೆ ತನ್ನ ಸಂಬಂಧಿಕರ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಯನ್ನು ಅಪಹರಿಸಿ, ಹಲ್ಲೆ ನಡೆಸಲಾಗಿತ್ತು.

ದಾಂಡೇಲಿ: 60 ವರ್ಷದ ದಿವ್ಯಾಂಗ ದಲಿತ ಮಹಿಳೆಗೆ ಲೈಂಗಿಕ ದೌರ್ಜನ್ಯವೆಸಗಿ, ದರೋಡೆ ಮಾಡಿದ ಆರೋಪಿಗೆ ಪೊಲೀಸರು ಗುಂಡಿಕ್ಕಿ ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಫೈರೋಜ್ ಯಾಸಿನ್ ಯರಗಟ್ಟಿ (23) ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಮೇಲೆ ದಾಳಿ ಮಾಡಿ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವುದಾಗಿ ತಿಳಿದುಬಂದಿದೆ.

ಜೂನ್ 12 ರಂದು ಮಹಿಳೆ ತನ್ನ ಸಂಬಂಧಿಕರ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಯನ್ನು ಅಪಹರಿಸಿ, ಹಲ್ಲೆ ನಡೆಸಲಾಗಿತ್ತು. ಬಳಿಕ ಆಕೆ ದಾಂಡೇಲಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆಯ ಸಂದರ್ಭದಲ್ಲಿ, ಪೊಲೀಸರು ಸುಮಾರು 100 ಶಂಕಿತರ ಫೋಟೋಗಳನ್ನು ತೋರಿಸಿದಾಗ ಯರಗಟ್ಟಿ ಅಪರಾಧಿ ಎಂದು ಗುರುತಿಸಿದ್ದಾರೆ.

ದಾಂಡೇಲಿಯ ಬೈಲ್ಪಾರ್ ನಿವಾಸಿ ಫೈರೋಜ್ ಯರಗಟ್ಟಿ ಕ್ರಿಮಿನಲ್ ಹಿನ್ನೆಲೆವುಳ್ಳವನಾಗಿದ್ದು, ಆತನ ವಿರುದ್ಧ ಅಕ್ರಮ ಮದ್ಯ ವ್ಯಾಪಾರ, ಗಾಂಜಾ ಮಾರಾಟ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ನಿಂದನೆ ಸೇರಿದಂತೆ ಸಾಕಷ್ಟು ಆರೋಪಗಳಿವೆ. ಆತ ಚಾಲಕನಾಗಿದ್ದು, ಮರಳು ಸಾಗಾಟಗಾರನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಈತನ ಬಂಧನಕ್ಕಾಗಿ ಡಿಎಸ್ ಪಿ ಶಿವಾನಂದ ಮದರಖಂಡಿ ನೇತೃತ್ವದಲ್ಲಿ ಪೊಲೀಸ್ ತಂಡವೊಂದನ್ನು ರಚಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ದಾಂಡೇಲಿ-ಯಲ್ಲಾಪುರ ಹೆದ್ದಾರಿಯ ಕುಳಗಿ ರಸ್ತೆಯ ಬಳಿ ಯರಗಟ್ಟಿಯನ್ನು ಪತ್ತೆ ಮಾಡಿದ್ದಾರೆ. ಕೂಡಲೇ ಆತನನ್ನು ಹಿಡಿಯಲು ಪ್ರಯತ್ನಿಸಿದಾಗ ಸಮೀಪದ ಅರಣ್ಯಕ್ಕೆ ಓಡಿಹೋಗಿ ಕಲ್ಲು ಮತ್ತು ಚಾಕುವಿನಿಂದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾನೆ.

ಈ ವೇಳೆ ಪೊಲೀಸ್ ಅಧಿಕಾರಿಗಳಾದ ಕೃಷ್ಣಪ್ಪ ಅವರಿಗೆ ಕಲ್ಲು ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿದರೆ, ಇಮ್ರಾನ್ ಅವರ ಕೈಗೆ ಚಾಕುವಿನಿಂದ ಗಾಯವಾಗಿದೆ. ಎಸ್‌ಐ ಕಿರಣ್‌ ಅವರಿಗೂ ಚಾಕುವಿನಿಂದ ಇರಲು ಆರೋಪಿ ಯತ್ನಿಸಿದ್ದಾನೆ ಎನ್ನಲಾಗಿದೆ.

ಎರಡು ಬಾರಿ ಎಚ್ಚರಿಕೆ ನೀಡಿದ ಎಸ್‌ಐ ಕಿರಣ್, ಕೊನೆಗೆ ಯರಗಟ್ಟಿ ಅವರ ಎಡಗಾಲಿನ ಮೊಣಕಾಲಿನ ಕೆಳಗೆ ಗುಂಡು ಹಾರಿಸಿದರು. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಗಳನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಅಧಿಕಾರಿಗಳನ್ನು ಭೇಟಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್