ಪ್ರಾತಿನಿಧಿಕ ಚಿತ್ರ 
ರಾಜ್ಯ

Covid-19: ರಾಜ್ಯದಲ್ಲಿ ಇಂದು 208 ಮಂದಿಗೆ ಪಾಸಿಟಿವ್, 103 ಮಂದಿ ಡಿಸ್ಚಾರ್ಜ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 208 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣ ಪತ್ತೆ ಮುಂದುವರೆದಿದ್ದು ಇಂದು ಮತ್ತೆ 208 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 208 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಅಂತೆಯೇ ಇದೇ ಅವಧಿಯಲ್ಲಿ ಸೋಂಕಿಗೆ ತುತ್ತಾಗಿದ್ದ 103 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ರಾಜ್ಯದಲ್ಲಿನ ಸಕ್ರಿಯ ಸೋಂಕಿತರ ಸಂಖ್ಯೆ 696ಕ್ಕೆ ಏರಿಕೆಯಾಗಿದೆ.

ಈ ಪೈಕಿ 692 ಮಂದಿ ಹೋಮ್ ಐಸೋಲಷನ್ (ಮನೆಯಲ್ಲೇ ಚಿಕಿತ್ಸೆ) ನಲ್ಲಿದ್ದಾರೆ. 4 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ. ರಾಜ್ಯದಲ್ಲಿ ಇಂದು ಒಟ್ಟು 386 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 348 RTPCR ಪರೀಕ್ಷೆ ಮಾಡಲಾಗಿದೆ. 38 RAT ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

SCROLL FOR NEXT