ಗದಗ: ಗದಗದಲ್ಲಿ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಪ್ರಕರಣ ಭಾರೀ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು ಆಕೆಯ ಪ್ರಿಯಕರನೇ ಹತ್ಯೆ ಮಾಡಿ ತನ್ನ ಜಮೀನಿನಲ್ಲೇ ಹೂತು ಹಾಕಿದ್ದು, ಪ್ರಕರಣ ಸಂಬಂಧ ಗದಗ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
ನಾರಾಯಣಪುರ ಗ್ರಾಮದ ನಿವಾಸಿಗಳಾದ ಸತೀಶ್ ಹಿರೇಮಠ ಮತ್ತು ಮಧುಶ್ರೀ ಅಂಗಡಿ ಇಬ್ಬರೂ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಇಬ್ಬರ ಕುಟುಂಬಗಳು ಇವರಿಬ್ಬರ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.
ಈ ನಡುವೆ ಸತೀಶ್ ನಿಂದ ಮಧುಳನ್ನು ದೂರ ಮಾಡುವ ಪ್ರಯತ್ನದಲ್ಲಿ ಯುವತಿಯ ಕುಟುಂಬ ಮಧುಳನ್ನು ಚಿಕ್ಕಪ್ಪನ ಮನೆಗೆ ಕಳುಹಿಸಲಿದ್ದರೂ. ಅದಾಗ್ಯೂ ಸತೀಶ್ ಬೈಕ್ ನಲ್ಲಿ ಅಲ್ಲಿಗೆ ಹೋಗಿ ಮಧುಳನ್ನು ಭೇಟಿ ಮಾಡಿದ್ದು, ಅಲ್ಲಿಂದ ಆಕೆಯನ್ನು ಕರೆದುಕೊಂಡು ಹೋಗಿದ್ದಾನೆ.
ಬಳಿಕ ಇಬ್ಬರ ನಡುವೆ ಜಗಳವಾಗಿದ್ದು, ಜಗಳ ವಿಕೋಪಕ್ಕೆ ತಿರುಗಿ ವೇಲ್‌ನಿಂದ ಮಧು ಅವರ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ನಂತರ ಮೃತದೇಹವನ್ನು ತನ್ನ ಜಮೀನಿನಲ್ಲೇ ಹೂತುಹಾಕಿದ್ದಾನೆ.
ಈ ನಡುವೆ 2025ರ ಜ.12ರಂದು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಗೆ ಗದಗ ಪುಟ್ಟರಾಜನಗರದ ನಿವಾಸಿ ಬಸವರಾಜ ಅಂಗಡಿ ತಮ್ಮ ತಂಗಿ ಮಧುಶ್ರೀ ನಾಪತ್ತೆ ಆಗಿದ್ದಾಳೆ ಎಂದು ದೂರು ನೀಡಿದ್ದರು.
ಬಳಿಕ ಪೊಲೀಸರು ಸತೀಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ, ಆತ ಮಧುಳನ್ನು ಭೇಟಿ ಮಾಡಿಲ್ಲ ಎಂದು ಹೇಳಿದ್ದಾನ. ಈ ನಡುವೆ ಪ್ರತ್ಯದರ್ಶಿಯೊಬ್ಬರು ಡಿಸೆಂಬರ್ 16 ರಂದು ಇಬ್ಬರನ್ನು ಒಟ್ಟಿಗೆ ನೋಡಿದ್ದಾಗಿ ಹೇಳಿದ್ದಾರೆ. ಬಳಿಕ ಸತೀಶನ ಮೇಲೆ ಸಂಶಯಗೊಂಡ ಪೊಲೀಸರು, ಆತನ ಮೊಬೈಲ್ ಲೊಕೇಶನ್ ಮತ್ತು ಆತನ ಮೇಲೆ ನಿಗಾ ಇಟ್ಟಾರೆ.
ಮತ್ತೊಂಡೆದೆ ಆತ ನೀಡಿದ ಹೇಳಿಕೆಗೂ ಘಟನೆ ನಡೆದ ದಿನ ಆತ ಇದ್ದ ಸ್ಥಳದ ಮೊಬೈಲ್ ಲೊಕೇಶನ್‌ಗೂ ತಾಳೆಯಾಗದಿರುವುದು ಸಂಶಯ ಹೆಚ್ಚಾಗುವಂತೆ ಮಾಡಿದೆ. ಬಳಿಕ ಆತನನ್ನು ಮತ್ತಷ್ಟು ತೀವ್ರವಾಗಿ ವಿಚಾರಣೆ ನಡೆಸಿದಾಗ ನಿಜ ಸಂಗತಿ ಬಾಯಿ ಬಿಟ್ಟಿದ್ದಾನೆ.
ಗದಗ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಅವರು ಮಾತನಾಡಿ, ಸಿಸಿಟಿವಿ ದೃಶ್ಯಾವಳಿಗಳು ಪ್ರಕರಣವನ್ನು ಭೇದಿಸಲು ನಮಗೆ ಸಹಾಯ ಮಾಡಿದವು. ನಮ್ಮ ಪೊಲೀಸ್ ತಂಡವು ಶ್ಲಾಘನೀಯ ಕೆಲಸ ಮಾಡಿದೆ ಮತ್ತು ಪೊಲೀಸರಿಗೆ ಬಹುಮಾನ ನೀಡಲಾಗುವುದು ಎಂದು ಹೇಳಿದ್ದಾರೆ.