ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಹಿರಿಯ ಅಧಿಕಾರಿಯೊಬ್ಬರು ಬುಧವಾರ 10 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಿಬಿಎಂಪಿಯ ಸಿ ವಿ ರಾಮನ್ ನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್ ವಿ ಯಾರಪ್ಪ ರೆಡ್ಡಿ ಅವರು ಬಾಕಿ ಬಿಲ್ ಬಿಡುಗಡೆ ಮಾಡಲು ಗುತ್ತಿಗೆದಾರರಿಂದ ಲಂಚ ಕೇಳುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ದೂರುದಾರರಾದ ಹೇಮಂತ್ ಜಿ ಎಂ, ಬಿಬಿಎಂಪಿ ಕಾರ್ಯನಿರ್ವಾಹಕ ಇಂಜಿನಿಯರ್ ತಮ್ಮ ಬಾಕಿ ಬಿಲ್ ಬಿಡುಗಡೆ ಮಾಡಲು ಲಂಚ ಕೇಳಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಮೇರೆಗೆ ಕಾರ್ಯನಿರ್ವಹಿಸಿದ ಲೋಕಾಯುಕ್ತ ಪೊಲೀಸರು, ಎಚ್ ವಿ ಯಾರಪ್ಪ ರೆಡ್ಡಿ ಅವರನ್ನು ಬಂಧಿಸಿದ್ದಾರೆ.
10 ಲಕ್ಷ ರೂ. ಲಂಚದ ಮೊತ್ತವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮಗಳಿಗಾಗಿ ಸುರಕ್ಷಿತ ಕಸ್ಟಡಿಯಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.