ಅಪಘಾತದ ಸ್ಥಳ 
ರಾಜ್ಯ

ಮಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವು

ಮೃತರನ್ನು ಎನ್‌ಎಸ್‌ಯುಐಗೆ ಸೇರಿದ ಓಂ ಶ್ರೀ(24) ಮತ್ತು ಮಂಗಳೂರಿನ ಕದ್ರಿ ನಿವಾಸಿ ಅಮನ್ ರಾವ್(23) ಎಂದು ಗುರುತಿಸಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜೆಪ್ಪಿನಮೊಗರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ತಡರಾತ್ರಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ(ಎನ್‌ಎಸ್‌ಯುಐ) ಸ್ಥಳೀಯ ನಾಯಕ ಸೇರಿದಂತೆ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಮೃತರನ್ನು ಎನ್‌ಎಸ್‌ಯುಐಗೆ ಸೇರಿದ ಓಂ ಶ್ರೀ(24) ಮತ್ತು ಮಂಗಳೂರಿನ ಕದ್ರಿ ನಿವಾಸಿ ಅಮನ್ ರಾವ್(23) ಎಂದು ಗುರುತಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಟಲಿಯ ಪ್ರಜೆ ಸಹಿತ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಯಲಾಗಿದೆ.

ಅಪಘಾತದಲ್ಲಿ ವಂಶಿ ಮತ್ತು ಆಶಿಕ್ ಎಂಬ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ನಗರದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಟಾಲಿ ಮೂಲದವರು ಎಂದು ಹೇಳಲಾಗುವ ಮತ್ತೊಬ್ಬ ಪ್ರಯಾಣಿಕ ಜೆರ್ರಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಮೃತ ಇಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಈ ಸಂಬಂಧ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!