ಡಿ.ಕೆ. ಶಿವಕುಮಾರ್ 
ರಾಜ್ಯ

ನಗರ ಬೆಳೆದರೂ ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ?; ವಿಧಾನಪರಿಷತ್ ಸದಸ್ಯರ ನೇತೃತ್ವದಲ್ಲಿ 'ಕೆರೆ ಅಧ್ಯಯನ ಸಮಿತಿ': ಡಿ.ಕೆ ಶಿವಕುಮಾರ್

ಕೆರೆಗಳಿಗೆ ಚರಂಡಿ ಕೊಳಚೆ ನೀರು ಬಿಡುತ್ತಿರುವವರು ಯಾರೇ ಆಗಿರಲಿ, ಯಾವುದೇ ಕೈಗಾರಿಕೆಗಳಾಗಲಿ ಯಾರಿಗೂ ಮುಲಾಜು ತೋರಬೇಡಿ.‌ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ.

ಬೆಂಗಳೂರು: ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ ಹಾಗೂ ಗೋಪಿನಾಥ್ ಅವರ ನೇತೃತ್ವದಲ್ಲಿ ಪ್ರತ್ಯೇಕ ಮೂರು ಸಮಿತಿಗಳನ್ನು ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೂಚನೆ ನೀಡಿದರು.

ಬನಶಂಕರಿಯಲ್ಲಿರುವ ಬೆಂಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ 2025-26ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಡಿಸಿಎಂ ಮಾತನಾಡಿದರು. ಈ ಸಮಿತಿಯು ನಗರದಾದ್ಯಂತ ಇರುವ ಕೆರೆಗಳ ಒತ್ತುವರಿ, ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವುದು ಸೇರಿದಂತೆ ಇತರೇ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದೆ.‌

ಕೆರೆಗಳಿಗೆ ಚರಂಡಿ ಕೊಳಚೆ ನೀರು ಬಿಡುತ್ತಿರುವವರು ಯಾರೇ ಆಗಿರಲಿ, ಯಾವುದೇ ಕೈಗಾರಿಕೆಗಳಾಗಲಿ ಯಾರಿಗೂ ಮುಲಾಜು ತೋರಬೇಡಿ.‌ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೆರೆಗಳನ್ನು ಈಗಲೇ ಸಂರಕ್ಷಣೆ ಮಾಡದಿದ್ದರೆ ಮುಂದಕ್ಕೆ ಕಷ್ಟವಾಗಲಿದೆ" ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ?

ನಗರ ಇಷ್ಟು ದೊಡ್ಡದಾಗಿ ಬೆಳೆದರೂ ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ? ನಗರದಲ್ಲಿ ಎಷ್ಟು ಬಾಲ್ಯ ವಿವಾಹಗಳು ನಡೆದಿವೆ ಎನ್ನುವ ಮಾಹಿತಿ ಇದೆಯೇ? ಎಂಬಿತ್ಯಾದಿ ಪ್ರಶ್ನೆಗಳ ಸುರಿಮಳೆಗೈದು ಅಧಿಕಾರಿಗಳ ಬೆವರಿಳಿಸಿದರು. ಬೆಂಗಳೂರು ನಗರದಲ್ಲಿ ವಿದ್ಯಾವಂತರು, ಬುದ್ಧಿವಂತರು, ಸುಶಿಕ್ಷಿತರು ಇದ್ದಾರೆ. ಬೆಂಗಳೂರು ದಿನೇ ದಿನೇ ಬೆಳೆಯುತ್ತಿದೆ. ಗ್ರೇಟರ್ ಬೆಂಗಳೂರು ಆಗಿ ಮಾರ್ಪಾಡಾಗಿದೆ. ಹೊರವಲಯದ ಪ್ರದೇಶಗಳನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಳ್ಳುವ ಒತ್ತಡವಿದೆ. ನಗರದ ಸೌಲಭ್ಯಗಳನ್ನು ಪಡೆಯಲು ಜನ ಉತ್ಸುಕರಾಗಿದ್ದಾರೆ" ಎಂದು ಹೇಳಿದರು.

ಆಸಕ್ತಿ ಇದ್ದರೆ ನನ್ನ ಜೊತೆ ಕೆಲಸ ಮಾಡಿ

"ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಯಾರ್ಯಾರು ಏನೇನೂ ಮಾಡುತ್ತಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇದೆ. ನನಗೇನೂ ಗೊತ್ತಾಗಲ್ಲ ಅನ್ನುವ ಭ್ರಮೆ ಬೇಡ. ಆತ್ಮ ಸ್ಥೈರ್ಯ ಕುಂದಿಸಬಾರದು ಎಂದು ನಿಮ್ಮ ವಿರುದ್ದ ಕ್ರಮ ತೆಗೆದುಕೊಳ್ಳುತ್ತಿಲ್ಲ. ನನ್ನ ಜೊತೆ ಕೆಲಸ ಮಾಡಲು ಆಸಕ್ತಿ ಇದ್ದರೆ ಇರಬಹುದು, ಇಲ್ಲದಿದ್ದರೆ ಬೇರೆ ಕಡೆಗೆ ನೀವು ಹೊರಡಬಹುದು" ಎಂದು ಖಡಕ್ ಎಚ್ಚರಿಕೆ ನೀಡಿದರು.

"ಶೈಕ್ಷಣಿಕ ಕ್ಷೇತ್ರಗಳಿಗೆ ಸಿಎಸ್ ಆರ್ ನಿಧಿಗಳನ್ನು ತರುವ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಯಿ ಸಿಇಓಗಳು ಉದ್ಯಮಿಗಳ ಸಭೆ ಕರೆದು ಚರ್ಚೆ ನಡೆಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಇರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಉತ್ತಮಗೊಳಿಸಲು ನಿಗಾವಹಿಸಬೇಕು ಹಾಗೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದರು.

ಬಾಲ್ಯ ವಿವಾಹ ತಡೆಯಬೇಕು ಅಂತ ಪ್ರತಿಜ್ಞೆ ಸ್ವೀಕಾರ ಮಾಡಿದ್ದೇವೆ. ಆದರೆ ಬೆಂಗಳೂರು ನಗರದಲ್ಲಿ ಎಷ್ಟೆಷ್ಟು ಬಾಲ್ಯ ವಿವಾಹ ನಡೆದಿದೆ ಅಂತ ನಿಮ್ಮ ಬಳಿ ಮಾಹಿತಿ ಇದೆಯಾ? ಪೊಲೀಸರು ಎಷ್ಟು ಕೇಸ್ ದಾಖಲು ಮಾಡಿದ್ದೀರಿ?" ಎಂದು ಪ್ರಶ್ನಿಸಿದರು. ಬೆಂಗಳೂರಿನ ರಸ್ತೆಗಳನ್ನು ಸುಸ್ಥಿತಿಯಲ್ಲಿಡಿ, ಅಗತ್ಯ ಬಿದ್ದ ಕಡೆ ಹೊಸ ರಸ್ತೆ ನಿರ್ಮಾಣ ಮಾಡಿ" ಎಂದೂ ಸಭೆಯಲ್ಲಿ ಸೂಚನೆ ನೀಡಿದರು.

"ನಗರದ ಪ್ರತಿಯೊಂದು ಶಾಲಾ,‌ ಕಾಲೇಜುಗಳ ಆಡಳಿತ ಮಂಡಳಿ,‌ ಮುಖ್ಯೋಪಾಧ್ಯಾಯರು, ಕುಲಪತಿಗಳ ಸಭೆ ಕರೆದು ಮಾದಕವಸ್ತು ನಿಯಂತ್ರಣದ ಬಗ್ಗೆ ತಿಳಿಸಬೇಕು. ಜೊತೆಗೆ ಶಾಲಾ, ಕಾಲೇಜುಗಳ ಹತ್ತಿರ ಅಂಗಡಿಗಳಲ್ಲಿ ಅಥವಾ ಇತರೇ ರೀತಿಯಲ್ಲಿ ಮಾದಕವಸ್ತುಗಳ ರವಾನೆ ಬಗ್ಗೆ ಅನುಮಾನ ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು" ಎಂದು ಚರ್ಚೆ ನಡೆಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT