ಮಂಚನಬೆಲೆ ಡ್ಯಾಂ  
ರಾಜ್ಯ

ಬೆಂಗಳೂರು: ಮಂಚನಬೆಲೆ ಡ್ಯಾಂನಲ್ಲಿ ಮುಳುಗಿ ಡಿಪ್ಲೊಮಾ ವಿದ್ಯಾರ್ಥಿ ದಾರುಣ ಸಾವು

ಬುಧವಾರ ಮಧ್ಯಾಹ್ನ 12.30 ರ ಸುಮಾರಿಗೆ ಮೃತ ವಿದ್ಯಾರ್ಥಿ ವಿಕಾಸ್, ತನ್ನ ಸ್ನೇಹಿತರಾದ ಸೃಜನ್ ಮತ್ತು ಲೋಕೇಶ್ ಗೌಡ ಅವರೊಂದಿಗೆ ಮಂಚನಬೆಲೆ ಡ್ಯಾಂಗೆ ಈಜಲು ಹೋಗಿದ್ದಾರೆ.

ಬೆಂಗಳೂರು: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಡಿಪ್ಲೊಮಾ ವಿದ್ಯಾರ್ಥಿ ಮಂಚನಬೆಲೆ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಮುರುಗೇಶಪಾಳ್ಯದ ನಿವಾಸಿ, ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿ ವಿಕಾಸ್ (19) ಎಂದು ಗುರುತಿಸಲಾಗಿದೆ.

ಬುಧವಾರ ಮಧ್ಯಾಹ್ನ 12.30 ರ ಸುಮಾರಿಗೆ ಮೃತ ವಿದ್ಯಾರ್ಥಿ ವಿಕಾಸ್, ತನ್ನ ಸ್ನೇಹಿತರಾದ ಸೃಜನ್ ಮತ್ತು ಲೋಕೇಶ್ ಗೌಡ ಅವರೊಂದಿಗೆ ಮಂಚನಬೆಲೆ ಡ್ಯಾಂಗೆ ಈಜಲು ಹೋಗಿದ್ದಾರೆ.

ನೀರಿನಲ್ಲಿ ಕೆಲವೇ ನಿಮಿಷಗಳಲ್ಲಿ ವಿಕಾಸ್ ಆಳಕ್ಕೆ ಸಿಲುಕಿ ಮುಳುಗಲು ಆರಂಭಿಸಿದ್ದಾನೆ. ಕೂಡಲೇ ಸ್ನೇಹಿತರು ಪೊಲೀಸರು ಹಾಗೂ ಅಗ್ನಿಶಾಮಕ ದಳ ಮತ್ತು ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಜಿದ್ದಾರೆ. ಬಳಿಕ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಸುಮಾರು 6 ಗಂಟೆಗಳ ಹುಡುಕಾಟದ ಬಳಿಕ ವಿಕಾಸ್ ಮೃತದೇಹ ಪತ್ತೆಯಾಗಿದೆ. ಇದೀಗ ಮೃತದೇಹವ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಸ್ವಾಭಾವಿಕ ಮರಣ ವರದಿ (ಯುಡಿಆರ್) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT