ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ 
ರಾಜ್ಯ

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ: SIT ತನಿಖೆಗೆ ಹೈಕೋರ್ಟ್ ತಡೆ

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪದ ಬಗ್ಗೆ ಎಸ್ಐಟಿ ತನಿಖೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ನೇತೃತ್ವದ ಪೀಠ ಈ ಆದೇಶ ನೀಡಿದೆ.

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪದ ಬಗ್ಗೆ ಎಸ್ಐಟಿ ತನಿಖೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ನೇತೃತ್ವದ ಪೀಠ ಈ ಆದೇಶ ನೀಡಿದೆ.

ಸರ್ಕಾರಿ ಅಧಿಸೂಚನೆಯಿಲ್ಲದೆ ಎಸ್.ಐ.ಟಿ ರಚನೆ ಕಾನೂನುಬಾಹಿರ ಎಂದು ಕುಮಾರಸ್ವಾಮಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತೆಗೆದುಕೊಂಡ ಎಲ್ಲಾ ಕ್ರಮಗಳನ್ನು ಅನೂರ್ಜಿತ ಎಂದು ಘೋಷಿಸಬೇಕೆಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಹಿರಿಯ ವಕೀಲರಾದ ಉದಯ್ ಹೊಳ್ಳ ಮತ್ತು ಎನ್.ವಿ. ನಿಶಾಂತ್ ಅವರು ಕೇಂದ್ರ ಸಚಿವರ ಕುಮಾರಸ್ವಾಮಿ ಪರವಾಗಿ ವಾದ ಮಂಡಿಸಿದರು.

ಬೆಂಗಳೂರಿನ ಸಮೀಪದಲ್ಲಿರುವ ಬಿಡದಿ ಪಟ್ಟಣದ ಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಕಬಳಿಕೆ ಆರೋಪದ ತನಿಖೆ ನಡೆಸಲು ಕರ್ನಾಟಕ ಸರ್ಕಾರ ಜನವರಿಯಲ್ಲಿ ಎಸ್ಐಟಿ ರಚಿಸಿತ್ತು.

ಪ್ರಕರಣದಲ್ಲಿ ಆರು ಎಕರೆ ಅತಿಕ್ರಮಣವನ್ನು ತೆರವುಗೊಳಿಸಲು ತಹಶೀಲ್ದಾರ್ ಆದೇಶ ನೀಡಿದ್ದರು. ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ನೇಮಿಸಿತ್ತು.

ಕೇತಗಾನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 8, 9, 10, 16 ಮತ್ತು 79 ರಲ್ಲಿ 14.04 ಎಕರೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದು.

ಜನವರಿ 28 ರಂದು ಎಸ್‌ಐಟಿ ರಚನೆಯ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚಿಸಲಾಗಿದೆ.

ಸುಮಾರು 14 ಎಕರೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿರುವ ಆರೋಪವನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ, ತಮ್ಮ ಮೇಲೆ ದಾಳಿ ಮಾಡಲು ಯತ್ನಿಸುತ್ತಿದೆ ಎಂದು ಹೇಳಿದ್ದರು.

"ನಾನು ಯಾವುದೇ ತನಿಖೆಯನ್ನು ಎದುರಿಸಲು ಸಿದ್ಧನಿದ್ದೇನೆ. ಆ ಭೂಮಿ ನನ್ನ ಆಸ್ತಿ ಎಂದು ಸಾಬೀತುಪಡಿಸಲು ನನ್ನ ಬಳಿ ಎಲ್ಲಾ ದಾಖಲೆಗಳಿವೆ. ರಾಜ್ಯ ಸರ್ಕಾರವು ಉದ್ದೇಶಪೂರ್ವಕವಾಗಿ ವಿವಾದಿತ ಕೇತಗಾನಹಳ್ಳಿ ಭೂಮಿಯ ಸಮೀಕ್ಷೆಯನ್ನು ನಡೆಸುತ್ತಿದೆ" ಎಂದು ಕುಮಾರಸ್ವಾಮಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT