ಸಾಂದರ್ಭಿಕ ಚಿತ್ರ 
ರಾಜ್ಯ

ಬಸ್‍ನಲ್ಲಿ ಕಿಟಕಿ ಪಕ್ಕದ ಸೀಟಿಗಾಗಿ ಯುವಕನಿಗೆ ಚಾಕು ಇರಿತ: ಇಬ್ಬರು ಅಪ್ರಾಪ್ತರು ಬಂಧನ

ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಇಬ್ಬರು ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಬುಧವಾರ ಜಗಳ ನಡೆದಿತ್ತು.

ಬೆಳಗಾವಿ: ಬಸ್‍ನಲ್ಲಿ ಕಿಟಕಿ ಪಕ್ಕದ ಸಿಟಿಗಾಗಿ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಇಬ್ಬರು ಅಪ್ರಾಪ್ತ ಬಾಲಕರನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಇಬ್ಬರು ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಬುಧವಾರ ಜಗಳ ನಡೆದಿತ್ತು.

ಬಾಲಕ ಹಾಗೂ ಯುವಕ ಮಾಜ್ ಸನದಿ ನಡುವೆ ಗಲಾಟೆಯಾಗಿತ್ತು. ಈ ವೇಳೆ ಬಾಲಕ, ಕೇಂದ್ರ ಬಸ್ ನಿಲ್ದಾಣಕ್ಕೆ ತನ್ನ ಸ್ನೇಹಿತನನ್ನು ಕರೆಸಿಕೊಂಡು ಸನದಿಗೆ ಚಾಕು ಇರಿದು ಪರಾರಿಯಾಗಿದ್ದ. ಇದೀಗ ಯುವಕ ಸ್ಥಳೀಯ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರು, ಘಟನೆ ನಡೆಯುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದೇವೆ. ಇನ್ನೂ ಮುಂದೆ ಇಂತಹ ಅಪರಾಧ ತಡೆಗೆ ವಿಶೇಷ ತಂಡ ರಚನೆ ಮಾಡಿದ್ದೇವೆಂದು ಹೇಳಿದ್ದಾರೆ.

ಮಾರ್ಕೆಟ್ ಪ್ರದೇಶ, ಸಾರ್ವಜನಿಕವಾಗಿ ಮಾರಕಾಸ್ತ್ರಗಳ ಹಿಡಿದು ಓಡಾಡುವುದು, ವಾಹನಗಳಲ್ಲಿ, ಬ್ಯಾಗ್‍ಗಳಲ್ಲಿ ಇಟ್ಟುಕೊಂಡು ಓಡಾಡುವುದು ಕಂಡು ಬಂದರೆ, ಅವರನ್ನ ಕೂಡಲೇ ಬಂಧಿಸಲಾಗುವುದು. ಅಂತವರ ಮೇಲೆ ರೌಡಿಶೀಟರ್ ತೆರೆಯಲಾಗುವುದು ಎಂದೂ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್