ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 
ರಾಜ್ಯ

ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಗೆ 15 ಸಾವಿರ ಮಂದಿ ನೋಂದಣಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ.

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಪರಿಷ್ಕರಣೆ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ. ಈಗ ಇರುವಂತೆ ವ್ಯವಸ್ಥೆ ಮುಂದುವರೆಯುತ್ತದೆ ಎಂದು ಹೇಳಿದರು.

ಈ‌ಗಾಗಲೇ ಏಪ್ರಿಲ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ.

ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ‌. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಗೃಹ ಲಕ್ಷ್ಮೀ ಯೋಜನೆಯು ಕರ್ನಾಟಕದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವ ಗುರಿಯನ್ನು ಹೊಂದಿದ್ದು, ಈ ಯೋಜನೆಯಡಿ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಜಮೆ ಮಾಡಲಾಗುತ್ತದೆ. ಆದರೆ, ಕೆಲವು ತಿಂಗಳಿಂದ ಹಣ ಬಿಡುಗಡೆಯಲ್ಲಿ ವಿಳಂಬವಾಗಿದ್ದು, ಫಲಾನುಭವಿಗಳಲ್ಲಿ ಆತಂಕ ಮೂಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!