ಡಿಕೆ.ಸುರೇಶ್ 
ರಾಜ್ಯ

Bamul ಅಧ್ಯಕ್ಷರಾಗಿ ಡಿ.ಕೆ ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಿ ಕೆ ಸುರೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಾಗಡಿ ತಾಲ್ಲೂಕಿನ ಕುದೂರು ರಾಜಣ್ಣ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದರು.

ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಿ ಕೆ ಸುರೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಾಗಡಿ ತಾಲ್ಲೂಕಿನ ಕುದೂರು ರಾಜಣ್ಣ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದರು.

ಈ ಎರಡು ಸ್ಥಾನಗಳಿಗೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಇಬ್ಬರೂ ಅವಿರೋಧವಾಗಿ ಆಯ್ಕೆಯಾದಂತಾಗಿದೆ.

ಚುನಾವಣಾ ಪ್ರಕ್ರಿಯೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ.ಸುರೇಶ್ ಅವರು, ಬಮೂಲ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನನ್ನನ್ನು ಅಧ್ಯಕ್ಷನನ್ನಾಗಿ, ಮಾಗಡಿ ತಾಲೂಕಿನ ಕುದೂರು ರಾಜಣ್ಣ ಅವರನ್ನು ಉಪಾಧ್ಯಕ್ಷರನ್ನಾಗಿ ಎಲ್ಲ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಒಮ್ಮತದಿಂದ ನನ್ನನ್ನು ಆಯ್ಕೆ ಮಾಡುವ ಮೂಲಕ ಸಹಕಾರ ಸಂಸ್ಥೆಯ ಜವಾಬ್ದಾರಿಯನ್ನು ನೀಡಿದ್ದಾರೆ. ಈ ಒಕ್ಕೂಟದ ಹಾಲು ಉತ್ಪಾದಕರು, ರೈತರು ನಮ್ಮ ಮೇಲೆ ನಿರೀಕ್ಷೆ ಇಟ್ಟು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಒಕ್ಕೂಟದಲ್ಲಿ ಬದಲಾವಣೆ ಬಯಸಿದ್ದಾರೆ. ಎಲ್ಲರ ಸಹಕಾರ ಪಡೆದು ಒಕ್ಕೂಟ ಹಾಗೂ ರೈತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ. ಬಮುಲ್ ಅನ್ನು ಬಲಪಡಿಸಲು ಹಲವು ಉಪಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಪರಿಸರ ಸ್ನೇಹಿ ಹಾಲಿನ ಸ್ಯಾಚೆಟ್‌ಗಳನ್ನು ಪರಿಚಯಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಏತನ್ಮಧ್ಯೆ, ಸುರೇಶ್ ಕೆ.ಎಂ.ಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?