ತಿಮ್ಮಪ್ಪ ರಾಮ ಮೂಲ್ಯ ಮತ್ತು ಜಯಂತಿ 
ರಾಜ್ಯ

ಮಂಗಳೂರು: 15 ವರ್ಷದ ನಂತರ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ದಂಪತಿ; ಸೀಮಂತಕ್ಕೂ ಮೊದಲೇ ತುಂಬು ಗರ್ಭಿಣಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ!

ಬಡಗುಂಡಿಯ ನಿವಾಸಿ ಜಯಂತಿ ಮತ್ತು ಮಿತ್ತಮಜಲು ನಿವಾಸಿ ತಿಮ್ಮಪ್ಪ ಮದುವೆಯಾಗಿ 15 ವರ್ಷಗಳಾಗಿತ್ತು, 15 ವರ್ಷದ ನಂತರ ಜಯಂತಿ ಗರ್ಭಿಣಿಯಾಗಿದ್ದರು.

ಮಂಗಳೂರು: ಸೀಮಂತದ ದಿನ ನಿಗದಿಯಾಗಿದ್ದ ಗರ್ಭಿಣಿ ಮಹಿಳೆ ಹಾಗೂ ಆಕೆಯ ಗಂಡನ ಮೃತದೇಹ ಪತ್ತೆ ಆಗಿರುವ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ.

ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (52) ಹಾಗೂ ಅವರ ಪತ್ನಿ ಜಯಂತಿ (45) ಮೃತರು. ಅವರು ಕಳೆದ ಕೆಲವು ವರ್ಷಗಳಿಂದ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ಕಿಲ್ತೋಡಿ ಎಂಬಲ್ಲಿ ಪತ್ನಿಯ ಮನೆಯಲ್ಲೇ ಸಂಸಾರ ನಡೆಸುತ್ತಿದ್ದರು.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ತಿಮ್ಮಪ್ಪ ರಾಮ ಮೂಲ್ಯ ಅವರ ಮನೆಯಿಂದ ಯಾರೂ ಹೊರಬಾರದಿದ್ದುದನ್ನು ಗಮನಿಸಿ ಮನೆಗೆ ಹೋಗಿ ನೋಡಿದಾಗ ಮನೆಯ ಬಾಗಿಲು ತೆರೆದೇ ಇತ್ತು. ಒಳ ನೋಡಿದಾಗ ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿದ್ದರೆ, ತಿಮ್ಮಪ್ಪ ನೇಣು ಬಿಗಿದುಕೊಂಡಿದ್ದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಜಯಂತಿ ಅವರಿಗೆ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಂದಿದ್ದು, ನಂತರ ತಿಮ್ಮಪ್ಪ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮೃತ ಜಯಂತಿ ಅವರ ತಂಗಿ ಸುಜಾತ ಫರಂಗಿಪೇಟೆ ಮತ್ತು ತಿಮ್ಮಪ್ಪರ ಸಹೋದರ ವಿಶ್ವನಾಥ ಅವರ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡಗುಂಡಿಯ ನಿವಾಸಿ ಜಯಂತಿ ಮತ್ತು ಮಿತ್ತಮಜಲು ನಿವಾಸಿ ತಿಮ್ಮಪ್ಪ ಮದುವೆಯಾಗಿ 15 ವರ್ಷಗಳಾಗಿತ್ತು, 15 ವರ್ಷದ ನಂತರ ಜಯಂತಿ ಗರ್ಭಿಣಿಯಾಗಿದ್ದರು. ಜುಲೈ 2 ರಂದು ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ