ಹಿಂದೂ ಧರ್ಮಕ್ಕೆ ಮರಳಿದ ವೆಂಕಟೇಶ್ ಕುಟುಂಬ 
ರಾಜ್ಯ

ಕನಸ್ಸಿನಲ್ಲಿ ಆಂಜನೇಯ: ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!

ಕಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಘರ್ ವಾಸ್ಸಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗಿರಿನಗರ ಕಾಲೊನಿಯಲ್ಲಿರುವ ಬುಡ್ಡ ಜಂಗಮ ಸಮಾಜದ ವೆಂಕಟೇಶ್ ಎಂಬುವರು ತಮ್ಮ ಕುಟುಂಬದ ಸಮೇತ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದರು.

ಯಾದಗಿರಿ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಘರ್ ವಾಸ್ಸಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗಿರಿನಗರ ಕಾಲೊನಿಯಲ್ಲಿರುವ ಬುಡ್ಡ ಜಂಗಮ ಸಮಾಜದ ವೆಂಕಟೇಶ್ ಎಂಬುವರು ತಮ್ಮ ಕುಟುಂಬದ ಸಮೇತ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದು, ಇದೀಗ ಮರಳಿ ಹಿಂದೂ ಧರ್ಮಕ್ಕೆ ಮರಳಿದ್ದಾರೆ.

ಇದಕ್ಕೆ ಕಾರಣವಾಗಿದ್ದು ಆಂಜನೇಯ. ಹೌದು...ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ ಬರುವಂತೆ ಹೇಳಿದ್ದು ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ. ಕೆಲ ವರ್ಷಗಳ ಹಿಂದೆ ಹಿಂದೂ ಧರ್ಮ ತೊರೆದಿದ್ದ ವೆಂಕಟೇಶ್ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ವೆಂಕಟೇಶ್ ಕುಟುಂಬಕ್ಕೆ ಮೇಲಿಂದ ಮೇಲೆ ಪೆಟ್ಟು ಬೀಳಲು ಆರಂಭಿಸಿತಂತೆ. ತಾನು ಯಾವುದು ಕೈಹಿಡಿತಿರಲಿಲ್ಲವಂತೆ. ಇದರ ನಡುವೆ ವೆಂಕಟೇಶ್ ಕನಸಿನಲ್ಲಿ ಆಂಜನೇಯ ಸ್ವಾಮಿ ಬರುತ್ತಿದ್ದನಂತೆ. ಹಿಂದೂ ಧರ್ಮಕ್ಕೆ ಮರಳುವಂತೆ ಆದೇಶ ನೀಡುತ್ತಿದ್ದನಂತೆ. ಇದೇ ಕಾರಣಕ್ಕೆ ಇದೀಗ ವೆಂಕಟೇಶ್ ಕ್ರಿಶ್ಚಿಯನ್ ಧರ್ಮ ತೊರೆದು, ಮತ್ತೆ ಹಿಂದೂ ಧರ್ಮಕ್ಕೆ ಮರಳಿದ್ದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್