ಯುವತಿ ಮೇಲೆ ಪುಂಡರ ಗ್ಯಾಂಗ್ ಲೈಂಗಿಕ ದೌರ್ಜನ್ಯ 
ರಾಜ್ಯ

Bengaluru Molestation case: ಗಾಂಜಾ ಮತ್ತಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಪುಂಡರ ಪೈಶಾಚಿಕ ಕೃತ್ಯ CCTVಯಲ್ಲಿ ಸೆರೆ!

ಬೆಂಗಳೂರಿನ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದೆ. ದಿನಸಿ ಖರೀದಿಸಲು ಹೋಗುತ್ತಿದ್ದ ಯುವತಿಯ ಮೇಲೆ ಐದಾರು ಯುವಕರು ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ.

ಬೆಂಗಳೂರು: ದಿನಸಿ ತರಲು ಹೋದ ಯುವತಿ ಮೇಲೆ ಪುಂಡರ ಗ್ಯಾಂಗ್ ವೊಂದು ಲೈಂಗಿಕ ದೌರ್ಜನ್ಯವೆಸಗಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರಿನ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದೆ. ದಿನಸಿ ಖರೀದಿಸಲು ಹೋಗುತ್ತಿದ್ದ ಯುವತಿಯ ಮೇಲೆ ಐದಾರು ಯುವಕರು ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ.

ಯುವತಿಯನ್ನು ರಕ್ಷಿಸಲು ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಹಲ್ಲೆಗೀಡಾದ ಯುವತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಮೂಲಗಳ ಪ್ರಕಾರ ರೇಣುಕಾ ಯಲ್ಲಮ್ಮ ಬಡಾವಣೆ ನಿವಾಸಿಯಾಗಿರುವ ಯುವತಿ ಜೂನ್ 22ರಂದು ಅಂದರೆ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದಳು. ಈ ವೇಳೆ ಐದಾರು ಜನರು ಯುವಕರು ನಡುರಸ್ತೆಯಲ್ಲಿ ಯುವತಿಯನ್ನು ಅಡ್ಡ ಹಾಕಿದ್ದಾರೆ.

ಬಳಿಕ, ಓರ್ವ ಯುವಕ ಯುವತಿಯ ಮೈಕೈ ಮುಟ್ಟಿ ಎಳೆದಾಡಿದ್ದಾರೆ. ಇದಕ್ಕೆ ಯುವತಿ ಪ್ರತಿರೋಧ ತೋರಿದ್ದಾಳೆ. ಆಗ, ಓರ್ವ ಯುವಕ ಯುವತಿ ಮೇಲೆ ಹಲ್ಲೆ ಮಾಡಿದ್ದಾನೆ.

ಯುವತಿ ನೆರವಿಗೆ ಬಂಧ ಸ್ಥಳೀಯರ ಮೇಲೂ ಹಲ್ಲೆ

ಈ ವೇಳೆ ಸ್ಥಳೀಯರು ಯುವತಿಯ ನೆರವಿಗೆ ಧಾವಿಸಿದ್ದಾರೆ. ನೆರವಿಗೆ ಧಾವಿಸಿದ ಸ್ಥಳೀಯರ ಮೇಲೂ ಯುವಕರು ಹಲ್ಲೆ ಮಾಡಿದ್ದಾರೆ. ಯುವತಿಯನ್ನು ಬಚಾವ್​ ಮಾಡಿ ಸ್ಥಳೀಯರು ಮನೆ ಬಳಿ ಕರೆದುಕೊಂಡು ಬಂದರೂ ಬಿಡದ ಯುವಕರು, ಆಕೆಯ ಮನೆ ಬಳಿ ಬಂದು ಗಲಾಟೆ ಮಾಡಿದ್ದಾರೆ. ಮನೆಯ ಕಾಪೌಂಡ್ ಒಳಗೆ ಬರಲು ಪುಂಡರು ಯತ್ನಿಸಿದ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.

ಸಿಸಿಟಿವಿಯಲ್ಲಿ ಯುವಕರ ಪುಂಡಾಟ ಸೆರೆ

ಇನ್ನು ಯುವತಿ ಮೇಲೆ ಪುಂಡರು ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಟ್ಟಲು ಬಂದರು.. ತಡೆದಾಗ ಹಲ್ಲೆ ಮಾಡಿದರು

ಈ ಕರಾಳ ಘಟನೆ ಕುರಿತು ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, 'ನಾನು (ಯುವತಿ) ಅಂಗಡಿ ಹೋಗುವ ಸಂದರ್ಭದಲ್ಲಿ ಯುವಕರು ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದರು. ಎಲ್ಲರೂ ಕುಡಿದಿದ್ದರು, ಗಾಂಜಾ ಹೊಡೆದಿದ್ದರು.

ಆಗ, ಅವರು ನನ್ನ ಅಡ್ಡಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಹೊಡೆಯಲು ಮತ್ತು ಮುಟ್ಟಲು ಬಂದರು. ಈ ವೇಳೆ ಸ್ಥಳೀಯರು ನನ್ನ ರಕ್ಷಿಸಿದರು. ಈ ವೇಳೆ ಅವರ ಮೇಲೂ ಹಲ್ಲೆ ಮಾಡಿದರು. ಅಲ್ಲದೇ, ನನ್ನ ಮನೆ ಗೇಟ್​ ಎಗರಿ ಒಳ ನುಗ್ಗಿದರು. ಏಳೆಂಟು ಜನ ಯುವಕರಿದ್ದರು. ಯುವಕರು ನಮ್ಮ ಮನೆ ಹಿಂದುಗಡೆ ವಾಸವಾಗಿದ್ದಾರಂತೆ. ಕಳೆದ ಒಂದು ವಾರದಿಂದ ಈ ಬಡವಾಣೆಯಲ್ಲಿ ವಾಸಿಸುತ್ತಿದ್ದೇನೆ ಎಂದರು.

ಅಂತೆಯೇ 'ಹಲ್ಲೆ ಮತ್ತು ದೌರ್ಜನ್ಯ ನಡೆಸಿದ ಯುವಕರು ಯಾರೆಂದು ಗೊತ್ತಿಲ್ಲ. ಈ ಸಂಬಂಧ ಬನ್ನೇರುಘಟ್ಟ ‌ಪೊಲೀಸ್ ಠಾಣೆಗೆ ನಾನು ದೂರು ನೀಡಿದ್ದೇನೆ. ನಾನು ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. ವಾರದ ಹಿಂದೆ ರೇಣುಕಾ ಯಲ್ಲಮ್ಮ ಬಡಾವಣೆ ಮನೆಗೆ ಶಿಫ್ಟ್‌ ಆಗಿದ್ದೆವು ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಮಕ್ಕಳ ಜೊತೆ ವಾಸವಿದ್ದೇನೆ' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT